ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮಸ್ಕಿಯಲ್ಲಿ ಬೃಹತ್ ಸಮಾವೇಶ.!

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಆರ್.ಬಸನಗೌಡ ತುರುವಿಹಾಳ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮಸ್ಕಿಯಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.ಇದೀಗ ಮಸ್ಕಿ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಬಿಜೆಪಿ ಪಕ್ಷವನ್ನು ನಡುಕ ಹುಟ್ಟಿಸುವಂತೆ ಮಾಡಿದೆ.ಇನ್ನೂ ಈ ಕಾರ್ಯಕ್ರಮಕ್ಕೆ ಸಾವಿರಾರು ಕಾರ್ಯಕರ್ತರು ಸಾಕ್ಷಿಯಾಗಿದ್ದರು. ಇನ್ನೂ ಇಡೀ ರಾಜ್ಯವೇ ಎದುರು ನೋಡುತ್ತಿರುವ ಮಸ್ಕಿ ವಿಧಾನಸಭಾ ಕ್ಷೇತ್ರ ಚುನಾವಣೆ ಮಾಜಿ ಶಾಸಕ ಪ್ರತಾಪ್ಗೌಡ ಪಾಟೀಲ್ ರಾಜೀನಾಮೆಯಿಂದ ಚುನಾವಣೆ ತೆರವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ದಿನಾಂಕವನ್ನು ನಿಗದಿ ಮಾಡಲಾಗುತ್ತದೆ. ಇನ್ನೂ ಈ ಬೃಹತ್ ಸಮಾವೇಶದಲ್ಲಿ 20 ಸಾವಿರತಕ್ಕೂ ಅಧೀಕ ಜನರು ಭಾಗವಹಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಾಯ್ಯ ಹಾಗೂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು.

ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಮಸ್ಕಿ

Please follow and like us:

Related posts

Leave a Comment