ವಿಡಿಯೋ ಕಾನ್ಫರೆನ್ಸ್ ಮೂಲಕ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೀಟಿಂಗ್..!

ಬೆಂಗಳೂರು: ಕೋವಿಡ್ ಲಸಿಕೆ ವಿತರಣೆ, ಹಂಚಿಕೆ ಮತ್ತು ವಿತರಣಾ ಕ್ರಮಗಳ ಕುರಿತಂತೆ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಇಂದು ಸಭೆ ನಡೆಸಿದ್ರು. ಪ್ರಧಾನಿ ಮೋದಿ ಜೊತೆಗಿನ ವೀಡಿಯೋ ಕಾನ್ಫರೆನ್ಸ್ ನಲ್ಲಿ ಸಿಎಂ ಯಡಿಯೂರಪ್ಪ ಭಾಗಿಯಾದ್ರು. ಈ ವೇಳೆ ಕಂದಾಯ ಸಚಿವ ಆರ್. ಅಶೋಕ್, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು‌ ಭಾಗಿಯಾಗಿದ್ದರು. ಇನ್ನು ಜಿಹೆಚ್ಎಂಸಿ ಚುನಾವಣೆ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೈದರಾಬಾದ್ ನಲ್ಲಿದ್ದಾರೆ. ಹಾಗಾಗಿ ಸಭೆಯಲ್ಲಿ ಭಾಗಿಯಾಗಿಲ್ಲ

Please follow and like us:

Related posts

Leave a Comment