Uncategorized

ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಇಳಿಕೆ..!

Published

on

ಕೇರಳ: ಕಠಿಣ ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಶಬರಿ ಮಲೆದೆ ಭೇಟಿ ನೀಡುತ್ತಿರುವ ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಎರಡು ತಿಂಗಳ ಅವಧಿಯ ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭವಾದ ಮೊದಲ ವಾರ ಕೇವಲ 9,000 ಮಂದಿ ಭಕ್ತರು ಸ್ವಾಮಿ ಅಯ್ಯಪ್ಪನ ಸನ್ನಿಧಿಗೆ ಭೇಟಿ ನೀಡಿದ್ದಾರೆ.ಪಂಬಾದ ಬೆಟ್ಟದ ಮೇಲಿನ ಈ ಪವಿತ್ರ ಸ್ಥಳಕ್ಕೆ ಕಳೆದ ವರ್ಷ ಇದೇ ಅವಧಿಯಲ್ಲಿ 3 ಲಕ್ಷ ಮಂದಿ ಭಕ್ತರು ತೆರಳಿದ್ದರು ಎನ್ನುತ್ತದೆ ದೇವಸ್ಥಾನದ ಆಡಳಿತ ಮಂಡಳಿಯ ದಾಖಲೆಗಳು. ಅಂದರೆ ಈ ಬಾರಿ ಕೊರೊನಾ ವೈರಸ್ ಭೀತಿ ಮತ್ತು ಕಟ್ಟುನಿಟ್ಟಾದ ನಿಯಮಾವಳಿಗಳ ಕಾರಣದಿಂದ ಭಕ್ತರ ಸಂಖ್ಯೆಯಲ್ಲಿ ಹಿಂದೆಂದೂ ಕಾಣದಷ್ಟು ಇಳಿಕೆಯಾಗಿದೆ. ಪ್ರಸಕ್ತ ಸಾಲಿನ ಶಬರಿಮಲೆ ಯಾತ್ರೆಯ ಚಟುವಟಿಕೆಗಳು ನವೆಂಬರ್ 16ರಂದು ದೇವಾಲಯದ ಬಾಗಿಲು ತೆರೆಯುವುದರೊಂದಿಗೆ ಆರಂಭವಾಗಿತ್ತು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version