ಮುಖ್ಯ ಮಂತ್ರಿ ಬಿಸ್ ವೈ ಅವರಿಂದ ಪದಕ ಸ್ವೀಕಾರ- ಅರಣ್ಯಾಧಿಕಾರಿ ತನ್ವೀರ್ ಅಹಮದ್..!

ಚಿಕ್ಕಬಳ್ಳಾಪುರ: ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಉಪವಲಯ ಅರಣ್ಯ ಅಧಿಕಾರಿ ತನ್ವೀರ್ ಅಹ್ಮದ್ ಅವರಿಗೆ ಸಿಎಂ ಬಿ,ಎಸ್, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪದಕ ಪ್ರಶಸ್ತಿಯನ್ನು ವಿತರಿಸಿದರು . ಅರಣ್ಯ ಇಲಾಖೆಯಲ್ಲಿ ಕಳೆದ ಐದು ವರ್ಷದಿಂದ ಉಪವಲಯ ಅರಣ್ಯ ಅಧಿಕಾರಿಯಾಗಿ, ಸೇವೆ ಸಲ್ಲಿಸುತ್ತಾ ಬಂದಿರುವ ತನ್ವೀರ್ ಅಹಮದ್ ಅವರು, ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣಾ ಕಾರ್ಯದಲ್ಲಿ ತೋರಿದ ಕಾಳಜಿಗಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ತಾಲೂಕಿನ ಉಪವಲಯ ಅರಣ್ಯ ಅಧಿಕಾರಿ ತನ್ವೀರ್ ಅಹ್ಮದ್ ಅವರಿಗೆ ಅರಣ್ಯ ಸಂರಕ್ಷಣೆ ಕ್ಷೇತ್ರದಿಂದ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿ ಪದಕ ಲಭಿಸಿದೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment