ತಮಿಳುನಾಡು, ಆಂಧ್ರಪ್ರದೇಶಕ್ಕೆ ನಿಸಾರ್ ಚಂಡಮಾರುತ ಭೀತಿ..!

ಚೆನ್ನೈ: ತಮಿಳುನಾಡು, ಆಂಧ್ರಪ್ರದೇಶಕ್ಕೆ ನಿಸಾರ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ನಿಸಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆ ಸುರಿಸುವ ಸಾಧ್ಯತೆ ಇದೆ. ನಾಳೆ ಕರೈಕಲ್, ಪುದುಚೆರಿಯಲ್ಲಿ, ನಾಳೆ ಮತ್ತು ನಾಳಿದ್ದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮೆ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಸುವ ಸಂಭವವಿದೆ. ವಿಶಾಖಪಟ್ಟಣಂ ಮತ್ತು ಪೂರ್ವ ಗೋದಾವರಿ ಜಿಲ್ಲೆಯಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಸ್ತುತ ನಿವಾರ್ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯತ್ತ ಪಶ್ಚಿಮದಿಂದ ಚಲಿಸುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ನವೆಂಬರ್ 26ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ.

Please follow and like us:

Related posts

Leave a Comment