ಜನರ ಸಹಭಾಗಿತ್ವ ಇದ್ದಾಗ ಮಾತ್ರ ಗ್ರಾಮವನ್ನು ಹೇಚ್ಚೆಚ್ಚು ಅಭಿವೃದ್ಧಿ ಪಡಿಸಲು ಸಾಧ್ಯ- ಪಿಡಿಒ ದಿವಾಕರ್..!

ಪಿರಿಯಾಪಟ್ಟಣ: ಗ್ರಾಮಗಳು ಅಭಿವೃದ್ಧಿಯಾದರೆ ದೇಶವು ಅಭಿವೃದ್ಧಿಯಾದಂತೆ ಆದದರಿಂದ ಗ್ರಾಮದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರೀಕನ ಸಹಕಾರ ಮುಖ್ಯ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎ ದಿವಾಕರ್ ತಿಳಿಸಿದರು.ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಲೆಕ್ಕ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ನರೇಗಾದಡಿ ನಡೆಯುವ ಪ್ರತಿಯೊಂದು ಕಾಮಗಾರಿಯ ಪ್ರಯೋಜನವನ್ನು ಪ್ರತಿ ನಾಗರಿಕನೂ ಪಡೆದುಕೊಂಡಾಗ ಗ್ರಾಮವನ್ನು ಹೆಚ್ಚು ಅಭಿವೃದ್ಧಿ ಪಡಿಸಲು ಸಾಧ್ಯ. ನರೇಗಾದಡಿ ನಡೆಯುವ ಕಾಮಗಾರಿಗಳ ಬಗ್ಗೆ ಸಾರ್ವಜನಿಕರಿಗೆ ಸಂಪೂರ್ಣವಾಗಿ ಮಾಹಿತಿ ನೀಡಿ ಕಾಮಗಾರಿಗಳ ಖರ್ಚು-ವೆಚ್ಚಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು.ಇದರ ಬಗ್ಗೆ ಏನಾದರೂ ಲೋಪದೋಷಗಳಿದ್ದಲ್ಲಿ,ಅದಕ್ಕೆ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ವೇದಿಕೆ ಇದಾಗಿದೆ.ಆದುದರಿಂದ ಪ್ರತಿಯೊಬ್ಬ ಗ್ರಾಮಸ್ಥರು ಸಾಮಾಜಿಕ ಲೆಕ್ಕ ಪರಿಶೀಲನಾ ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.ಪಿರಿಯಾಪಟ್ಟಣ ತಾಲ್ಲೂಕು ಸಂಯೋಜನಾಧಿಕಾರಿ ಯೋಗೇಶ್ ಮಾತನಾಡಿ ನರೇಗಾ ಹಾಗೂ 14ನೇ ಹಣಕಾಸು ಯೋಜನೆಯ ಕಾಮಗಾರಿಯ ಖರ್ಚು-ವೆಚ್ಚಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕಿ ದಮಯಂತಿ ಮಾತನಾಡಿ,ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಹಾಗೂ ಉನ್ನತ ವ್ಯಾಸಂಗಕ್ಕಾಗಿ ಸರಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ ಇದರ ಸದುಪಯೋಗವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಮಾಜದಲ್ಲಿ ಸಾಮಾಜಿಕ ಬದಲಾವಣೆ ಮಾಡುವ ಉದ್ದೇಶದಿಂದ ಹಾಗೂ ಅಸ್ಪೃಶ್ಯತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಗಂಡು ಅಥವಾ ಹೆಣ್ಣು ಅಂತರ್ಜಾತಿಯ ವಿವಾಹವಾದರೆ ಅವರ ಮುಂದಿನ ಜೀವನಕ್ಕಾಗಿ ಹಣದ ನೆರವು ನೀಡಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಲೆಕ್ಕ ಸಹಾಯಕ ಗಣೇಶ್,’ನರೇಗಾದ ಕಿರಿಯ ಅಭಿಯಂತರ ಲೋಕೇಶ್,ಪಂಚಾಯತಿ ಸಿಬ್ಬಂದಿಗಳಾದ ದೀಪು, ಮುರುಗೇಶ್,ಅಣ್ಣಯ್ಯ, ದೇವರಾಜ್ ,ಗ್ರಾಮದ ಮುಖಂಡರಾದ ನಟೇಶ್,ಕಪಾಲಿ ಹರದೂರು ಮೈಲಾರಿ ಇತರರು ಹಾಜರಿದ್ದರು

ವರದಿ- ಮಾಗಳಿ ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Please follow and like us:

Related posts

Leave a Comment