ವಕೀಲರ ಸಂಘದ ವತಿಯಿಂದ ಸಂವಿಧಾನ ದಿನಾಚರಣೆ..!

ಮಳವಳ್ಳಿ: ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ ಸಂವಿಧಾನ ದಿನಾಚರಣೆ ಹಾಗೂ ರಾಷ್ಟ್ರೀಯ ಏಕತಾ ಸಪ್ತಾಹ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಅವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಜೆಎಂಎಫ್ ಸಿ ಹಿರಿಯ ಸಿವಿಲ್ ನ್ಯಾಯಾದೀಶ ಕೆ.ಎಂ ರಾಧಕೃಷ್ಣ ರವರು ಉದ್ಘಾಟಿಸಿ ಮಾತನಾಡಿ, ರಾಷ್ಟ್ರದ ಅಳಿವು ಮತ್ತು ಉಳಿವುಯನ್ನು ಆ ರಾಷ್ಟ್ರದ ಸಂವಿಧಾನ ನಿರ್ದರಿಸುತ್ತದೆ. ಆದೇ ರೀತಿ ನಮ್ಮ ರಾಷ್ಟ್ರದ ಆಡಳಿತದ ವ್ಯವಸ್ಥೆ ,ರಾಷ್ಟ್ರದ ಅಭಿವೃದ್ಧಿ ಹಾಗೂ ಜನಗಳ ಸುರಕ್ಷತೆ ಹಾಗೂ ಸುಭದ್ರತೆಯೂ ಸಹ ನಮ್ಮ ಸಂವಿಧಾನದ ಮೇಲೆ ಅವಲಂಬಿತವಾಗಿರುತ್ತದೆ ಎಂದರು.ಇನ್ನೂ ಇದುವರೆಗೂ ರಾಷ್ಟ್ರೀಯ ಕಾನೂನು ದಿನವನ್ನು ಕಳೆದ ಐದು ವರ್ಷದಿಂದ ಸಂವಿಧಾನ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾದೀಶೆ ಕೆ ಶೆಮೀದಾ, 1 ನೇ ಹೆಚ್ಚುವರಿ ಸಿವಿಲ್ ನ್ಯಾಯಾದೀಶೆ ಐಶ್ಚರ್ಯ ಚಿದಾನಂದಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ,ಕ್ಷೇತ್ರ ಸಮಾನ್ವಯಾಧಿಕಾರಿ ಯೋಗೇಶ ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ: ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment