ಕೊಳಚೆ ಪ್ರದೇಶವಾಗಿ ಮಾರ್ಪಟ್ಟ ವಡೇರಹಟ್ಟಿ ಗ್ರಾಮ.!

ಬೆಳಗಾವಿ: ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾದ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಏನೂ ಸಂಬಂಧವಿಲ್ಲವೆನೋ ಎನ್ನುವ ರೀತಿ ವರ್ತಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಈರಗಾರ ಓಣಿ ಬೀದಿ ಬೀದಿಗಳಲ್ಲಿ ಹಾಗೂ ಮನೆ ಹಿಂದುಗಡೆ ಹಾಗೂ ಮನೆ ಒಳಗಡೆ ಗಬ್ಬೆದ್ದು ನಾರುವ ಚರಂಡಿ ನೀರು ತುಂಬಿದ್ದು, ಅಂತರದಲ್ಲಿರುವ ಈ ಗ್ರಾಮ ಕೊಳಚೆ ಪ್ರದೇಶವಾಗಿ ಮಾರ್ಪಟ್ಟಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ವಚ್ಛತೆಯ ವಿಷಯದ ಬಗ್ಗೆ ಕನಿಷ್ಟ ಜ್ಞಾನ ಇಲ್ಲಂದತಾಗಿದೆ. ಇದರಿಂದಾ ಗ್ರಾಮದಲ್ಲಿರುವ ವಯೋವೃದ್ದರು, ಮಕ್ಕಳು ವಿವಿಧ ಕಾಯಿಲೆಗಳಿಗೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಗ್ರಾಮದ ತುಂಬೆಲ್ಲಾ ಗಬೆದ್ದು ಚರಂಡಿ ನೀರು ಹರಿಯುವದನ್ನು ನೋಡಿ ಗ್ರಾಮಸ್ಥರು ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುಧ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈಗಲಾದರೂ ಅಧಿಕಾರಿಗಳು ಗಮನ ಹರಿಸಿ ಸ್ವಚ್ಚ ಗ್ರಾಮವನ್ನಾಗಿ ಮಾಡುತ್ತಾರಾ ಅಥವಾ ಜಾಣ ಕುರುಡುತನ ಪ್ರದರ್ಶಿಸುತ್ತಾರಾ ಎಂದು ಕಾದು ನೋಡಬೇಕಿದೆ.

ವರದಿ-ಶಂಕರ ಭಜಂತ್ರಿ ಎಕ್ಸ್ ಪ್ರೆಸ್ ಟಿವಿ ಮೂಡಲಗಿ

Please follow and like us:

Related posts

Leave a Comment