ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟ ಸಮಿತಿಯಿಂದ ಸಿಎಂ ಭೇಟಿ..!

ಕಾಗಿನೆಲೆಯ ನಿರಂಜನಾಂದಪುರಿ ಸ್ವಾಮೀಜಿಗಳ ನೇತೃತ್ವದ ನಿಯೋಗ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಕುರುಬ ಸಮುದಾಯವನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಲು ಒತ್ತಾಯಿಸಿದೆ. ನಿಯೋಗ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಭೇಟಿ ಮಾಡಿತು. ಕಾಗಿನೆಲೆ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಸಮಿತಿ ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಸಚಿವ ವಿ. ಸೋಮಣ್ಣ, ವಿಧಾನ ಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್, ಮಾಜಿ ಎಂಎಲ್ಸಿ ಎಚ್.ಎಂ.ರೇವಣ್ಣ, ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಉಪಸ್ಥಿತರಿದ್ದರು.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment