ಇಬ್ಬರೂ ಮಕ್ಕಳೊಡನೆ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ..!

ಮಂಡ್ಯ: ಮಹಿಳೆಯೊಬ್ಬಳು ಇಬ್ಬರು ಮಕ್ಕಳನ್ನ ನೇಣಿಗೆ ಹಾಕಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತ ದುರ್ದೈವಿಗಳು 26 ವರ್ಷದ ನಿವೇದಿತಾ, ಹಾಗೂ 6 ವರ್ಷದ ಗಾನವಿ, 4 ವರ್ಷದ ಉಲ್ಲಾಸ್ ಎಂದು ತಿಳಿದು ಬಂದಿದೆ. ಇನ್ನೂ ಈ ಮಹಿಳೆ ನಲ್ಲಹಳ್ಳಿಯವರಾಗಿದ್ದು, ಕಳೆದ 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವವರ ಜೊತೆ ಮದುವೆ ಮಾಡಲಾಗಿತ್ತು. ಗಂಡ ಹೆಂಡತಿ ಅನ್ಯೋನ್ಯವಾಗಿ ಸಂಸಾರ ಮಾಡಿಕೊಂಡಿದ್ದರು. ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ. ಆದ್ರೆ ಇದೀಗ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು,ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನೀಖೆ ಕೈಗೊಂಡಿದ್ದಾರೆ.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಂಡ್ಯ

Please follow and like us:

Related posts

Leave a Comment