ಮಕ್ಕಳ ಶಿಕ್ಷಣಕ್ಕೆ ಪಾಲಕರ ಕಾಳಜಿ ಅಗತ್ಯ-ಜಯಶ್ರೀ ಚೆನ್ನಾಳ..!

ರಾಯಚೂರು: ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕಡ್ಡಾಯ ಶಿಕ್ಷಣ ಕಾಯ್ದೆ (ಆರ್ಟಿಇ) ಅನುಷ್ಠಾನದ ಕುರಿತು ತರಬೇತಿ ಕಾರ್ಯಕ್ರಮವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಜಯಶ್ರೀ ಚೆನ್ನಾಳ ಉದ್ಘಾಟಿಸಿದರು. ಸರ್ಕಾರ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಜಾರಿಗೆ ಮಾಡಿದ್ದು, ಪಾಲಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಶಿಕ್ಷಣ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಜಯಶ್ರೀ ಚೆನ್ನಾಳ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ ಜಿಲ್ಲಾ, ತಾಲ್ಲೂಕು ಮಟ್ಟದ ಕಡ್ಡಾಯ ಶಿಕ್ಷಣ ಕಾಯ್ದೆ (ಆರ್ಟಿಇ) ಅನುಷ್ಠಾನದ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಕಡ್ಡಾಯ ಶಿಕ್ಷಣ ಜಾರಿ ಮಾಡಿದೆ. ದೇಶದ ಅಭಿವೃದ್ಧಿಗೆ ಶಿಕ್ಷಣ ಪ್ರಗತಿ ಮುಖ್ಯ, ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಜಾಗೃತಿ ವಹಿಸಬೇಕಿದೆ. ಮಕ್ಕಳ ಶಿಕ್ಷಣ ಪಾಲಕರ ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ರಾಷ್ಟ್ಟೀಯ ಶಿಕ್ಷಣ ನೀತಿ–2020 ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಹಕ್ಕುಕಾಯ್ದೆಯಡಿಯಲ್ಲಿ ಪ್ರವೇಶ ಪಡೆಯಬಹುದು. ಖಾಸಗಿ ಶಾಲೆಗಳ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧೆಯಲ್ಲಿದ್ದಾರೆ. ಮಕ್ಕಳಿಗೆ ಶಿಕ್ಷಣ ನೀಡಿದ್ದಲ್ಲಿ ಬಾಲ್ಯವಿವಾಹ, ಬಾಲ ಕಾರ್ಮಿಕದಂತಹ ಅನಿಷ್ಟ ಪದ್ದತಿ ತೊಲಗಿ ಉತ್ತಮ ಸಮಾಜ ನಿರ್ಮಾಣವಾಗಲಿದೆ ಎಂದು ತಿಳಿಸಿದರು. ಇನ್ನೂ ರಿಮ್ಸ್ ಆಸ್ಪತ್ರೆಯ ಪ್ರಾಚಾರ್ಯ ಡಾ.ಬಸವರಾಜ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭೀಮಣ್ಣ ಎಚ್.ಗೋನಾಳ, ಮತ್ತೀತರು ಭಾಗಿಯಾಗಿದ್ದರು.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ರಾಯಾಚೂರು

Please follow and like us:

Related posts

Leave a Comment