ತಿಪಟೂರು

ವಿವಿಧ ರೈತ ಪರ ಸಂಘಟನೆಗಳಿಂದ ಪ್ರತಿಭಟನೆ..!

Published

on

ತಿಪಟೂರು: ತಿಪಟೂರು ತಾಲ್ಲೂಕು ಕಚೇರಿಯ ಮುಂದೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯವನ್ನು ಖಂಡಿಸಿ ವಿವಿಧ ರೈತ ಸಂಘಟನೆಗಳು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಹಸಿರು ಸೇನೆ ಅಧ್ಯಕ್ಷ ತಿಮ್ಲಾಪುರ ದೇವರಾಜು ರವರು ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರದ ಅಮಾನವೀಯ ನಡೆಯನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಕರೋನಾ ಲಾಕ್ ಡೌನ್ ನಿಂದ ರೈತರು ಮತ್ತು ಕಾರ್ಮಿಕರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳನ್ನು ತಂದಿರುವುದು ಅಮಾನವೀಯ ನಡೆ ಇಂತಹ ನೀತಿಯನ್ನು ಖಂಡಿಸಿ ರೈತ ಸಂಘಟನೆಗಳು ದೆಹಲಿ ಚಲೋ ಹಮ್ಮಿಕೊಂಡಿದೆ ಚಳುವಳಿಯನ್ನು ಹತ್ತಿಕ್ಕಲು ಹೊರಟಿರುವುದು ಅಕ್ಷಮ್ಯ ಅಪರಾಧವೆಂದರು.ರೈತ ಸಂಘದ ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ ಮಾತನಾಡಿ ಕೇಂದ್ರ ಸರ್ಕಾರದ ನೀತಿಗಳು ರೈತರ ಬೆನ್ನೆಲುಬನ್ನೇ ಮುರಿದು ಅದನ್ನೇ ಬ್ರಹ್ಮಾಸ್ತ್ರ ಮಾಡಿಕೊಂಡು ರೈತರ ಜಮೀನನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿರುವುದು ಎಷ್ಟು ಸರಿ ಎಂದು ಟೀಕಿಸಿದರು ರೈತ ವಿರೋಧಿ ನೀತಿಗಳನ್ನು ತಕ್ಷಣ ವಾಪಸ್ಸು ಪಡೆಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ವಿವಿಧ ರೈತ ಸಂಘಟನೆಗಳು ಆರ್ ಕೆಎಸ್ ನ ಸದಸ್ಯರು ಹೊನ್ನವಳ್ಳಿ ಏತ ನೀರಾವರಿ ಸದಸ್ಯರು ಭಾಗವಹಿಸಿದ್ದರು.

ವರದಿ- ಸಿದ್ಧೇಶ್ವರ ಸಿ.ಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು.

Click to comment

Trending

Exit mobile version