ತಿಪಟೂರಿನಲ್ಲಿ ಬಿಜೆಪಿ ಗ್ರಾಮ ಸ್ವರಾಜ್ ಸಮಾವೇಶ..!

ತಿಪಟೂರು: ನಗರದ ಪಿಜಿಎಂ ಕಲ್ಯಾಣ ಮಂಟಪದಲ್ಲಿ ನಡೆದ ಗ್ರಾಮ ಸ್ವರಾಜ್ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್. ಈಶ್ವರಪ್ಪ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಲೋಕಸಭೆ ವಿಧಾನಸಭೆ ಗೆಲುವಿಗಿಂತ ಹೆಚ್ಚು ಆಸಕ್ತಿ ವಹಿಸಿ ಗ್ರಾಪಂ ಚುನಾವಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ 6 ತಂಡ ಮಾಡಿಕೊಂಡು ಓಡಾಟ ಆರಂಭವಾಗಿದೆ. ಪ್ರತಿ ಜಿಲ್ಲೆಯಲ್ಲಿ 2ಕಡೆ ಗ್ರಾಮ ಸ್ವರಾಜ್ ಸಮಾವೇಶ ಮಾಡುತ್ತಿದ್ದು ಪ್ರತಿಯೊಬ್ಬ ಕಾರ್ಯಕರ್ತನು ದುಡಿಯಬೇಕು. ರಾಜ್ಯದ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಶೇಕಡ 80 ರಷ್ಟು ಅಭ್ಯರ್ಥಿಗಳು ಅಧಿಕಾರ ಹಿಡಿಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು ಯಾರು ಕೂಡ ಹೇಳಿಕೆ ಕೊಡದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಆದೇಶವಿದೆ ನಾವು ಆದೇಶ ಪಾಲಿಸಬೇಕಿದೆ ಇದರ ಬಗ್ಗೆ ಕೇಂದ್ರ ನಾಯಕರು ಮುಖ್ಯಮಂತ್ರಿ ರಾಜ್ಯಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಸಂಸದ ಪ್ರತಾಪಸಿಂಹ ಮಾತನಾಡಿ ಇದು ಕಾರ್ಯಕರ್ತರ ಚುನಾವಣೆ ಆಗಿರುವುದರಿಂದ ನಾಯಕರೇ ಕಾರ್ಯಕರ್ತರಾಗಿ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ ಸಿ ಮಾಧುಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಬಿ ಸುರೇಶಗೌಡ, ಸಂಸದರಾದ ಜಿ ಎಸ್ ಬಸವರಾಜು, ನಾರಾಯಣಸ್ವಾಮಿ,ಶಾಸಕ ಜ್ಯೋತಿಗಣೇಶ್, ಮಸಾಲೆ ಜಯರಾಮ್, ಬಿ ಸಿ ನಾಗೇಶ್, ಮಾಜಿ ಸಚಿವ ಸೊಗಡು ಶಿವಣ್ಣ, ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ-ಸಿದ್ದೇಶ್ ಎಕ್ಸ್ ಪ್ರೆಸ್ ಟಿವಿ ತಿಪಟೂರು

Please follow and like us:

Related posts

Leave a Comment