ವೈದ್ಯರ ನಿರ್ಲಕ್ಷಕ್ಕೆ ವ್ಯಕ್ತಿ ಸಾವು- ಸಂಬಂಧಿಕರಿಂದ ಆಸ್ಪತ್ರೆ ಗಾಜು ಪುಡಿ..!

ಕೋಲಾರ : ವೈದ್ಯರ ನಿರ್ಲಕ್ಷದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಸ್ಪತ್ರೆಯ ಗಾಜುಗಳು ಪುಡಿ ಪುಡಿ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ನಗರದ ಶ್ರೇಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕದಿರಪ್ಪ ಅವರನ್ನು, ಕೋಲಾರದ ಶ್ರೇಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಇಂಜೆಕ್ಷನ್ ನೀಡುತ್ತಿದ್ದಂತೆ ಕದಿರಪ್ಪ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.ಇನ್ನು ರೋಗಿ ಕದಿರಪ್ಪ ಮೃತಪಟ್ಟ ಹಿನ್ನೆಲೆ ಸಂಬಂಧಿಕರು ಹಾಗು ವಿವಿಧ ಸಂಘಟನೆಗಳು ಆಸ್ಪತ್ರೆ ಬಳಿ ಜಮಾವಣೆಗೊಂಡು ಆಸ್ಪತ್ರೆ ವೈದ್ಯರನ್ನು ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆಯ ಗಾಜು ಪುಡಿಪುಡಿ ಮಾಡಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment