ಕೃಷಿ ನೀತಿಗಳನ್ನು ವಿರೋಧಿಸಿ ಅನ್ನದಾತರ ಪ್ರತಿಭಟನೆ..!

ಮುಳಬಾಗಿಲು: ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ನೀತಿಗಳನ್ನು ವಿರೋಧಿಸಿ ಇಂದು ಭಾರತ್ ಬಂದ್ ಹಿನ್ನೆಲೆ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲೂ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಇನ್ನು ಮುಳಬಾಗಿಲು ಪಟ್ಟಣದ ಟಿಎಪಿಸಿಎಂಎಸ್ ವೃತ್ತದಲ್ಲಿ ರಸ್ತೆ ತಡೆ ನಡೆಸುತ್ತಿದ್ದ ವಿವಿಧ ಸಂಘಟನೆಗಳ ಹೋರಾಟಗಾರರನ್ನು ಮುಳಬಾಗಿಲು ಪೋಲೀಸರು ಬಂಧಿಸಿದರು. ಅಲ್ಲದೇ ಪ್ರತಿಭಟನೆ ನೇತೃತ್ವ ವಹಿಸಿದ್ದಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿ ಸೇರಿದಂತೆ ಹಲವಾರು ರೈತ ಮುಖಂಡರನ್ನು ಪೊಲೀಸರು ಬಂಧಿಸಿ ಕರೆದೊಯ್ದು ಬಳಿಕ ಬಿಡುಗಡೆ ಮಾಡಿದ್ರು. ಒಟ್ಟಾರೆ ಕೇಂದ್ರ ಸರ್ಕಾರದ ನೂತನ ಕೃಷಿ ವಿರೋಧಿ ಕಾನೂನನ್ನು ವಾಪಸ್ ಪಡೆಯುವಂತೆ ಅನ್ನದಾತರು ರಸ್ತೆಗಿಳಿದು ಹೋರಾಟ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ರು.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು

Please follow and like us:

Related posts

Leave a Comment