Uncategorized

ಲಾರಿ ಹಾಗೂ ಬೈಕ್ ನಡುವೆ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು..!

Published

on

ಮಾಲೂರುಃ ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಲೂರು-ನರಸಾಪುರ ರಸ್ತೆಯ ದೊಡ್ಡಶಿವಾರ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮಹೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಮಹೇಶ್ ಕುಮಾರ್ ಎಂಬ ಯುವಕ ತಾಲೂಕಿನ ಮುತ್ತದಹಳ್ಳಿ ಗ್ರಾಮದಲ್ಲಿ ಬಳಿ ಇರುವ ಜೆಬಿಎಂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.ಎಂದಿನಂತೆ ಬೆಳಗಿನ ಜಾವ ಕಾರ್ಖಾನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ನರಸಾಪುರ ಮುಖ್ಯ ರಸ್ತೆಯ ಕೋಳಿ ಫಾರಂ ಬಳಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version