ಮಂಡ್ಯ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನ ಹರಾಜು..!

ಮಂಡ್ಯ: ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆಯ ಪ್ರಕ್ರಿಯೆಗಳು ಜರುಗುತ್ತಿದ್ದು, ಈ ಮೂಲಕ ಲೋಕಲ್ ವಾರ್ ಗರಿಗೆದರಿದೆ. ಇನ್ನೊಂದೆಡೆ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡುವ ನೆಪ ಇಟ್ಟುಕೊಂಡು ಗ್ರಾಮ ಪಂಚಾಯ್ತಿಗಳಲ್ಲಿ ಅಭ್ಯರ್ಥಿ ಸ್ಥಾನವನ್ನು ಹರಾಜು ಹಾಕಲಾಗುತ್ತಿದೆ. ಹರಾಜು ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಲಾಳನಕೆರೆಯಲ್ಲಿ ಕುರಿ-ಕೋಳಿಗಳ ರೀತಿ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನವನ್ನು ಹರಾಜು ಹಾಕುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಲಕ್ಷಾಂತ ರೂಪಾಯಿಗಳಿಗೆ ಗ್ರಾಮ ಪಂಚಾಯ್ತಿ ಸ್ಥಾನವನ್ನು ಲಾಳನಕೆರೆ ಗ್ರಾಮಸ್ಥರು ಮನೆಯೊಂದರಲ್ಲಿ ಬಿಡ್ ಮೂಲಕ ಹರಾಜು ಹಾಕಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಯವರೆಗೆ ಸವಲತ್ತುಗಳು ದೊರಕಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯ್ತಿ ವ್ಯವಸ್ಥೆಯನ್ನು ಭಾರತ ದೇಶದಲ್ಲಿ ಮಾಡಕೊಳ್ಳಲಾಗಿದೆ. ಆದರೆ ಇದೀಗ ಗ್ರಾಮ ಪಂಚಾಯ್ತಿ ಸ್ಥಾನಗಳನ್ನು ಲಕ್ಷಾಂತರ ರೂಪಾಯಿಗಳಿಗೆ ಹರಾಜು ಹಾಕುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗುತ್ತಿದೆ.

ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ನಾಗಮಂಗಲ

Please follow and like us:

Related posts

Leave a Comment