ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆದು. ಒಂದು ಕಡೆ ರೈತರು ಪ್ರತಿಭಟನೆ ನಡೆಸಿದ್ರೆ ಮತ್ತೊಂದು ಕಡೆ ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ವಿಧಾನಸೌಧ ಚಲೋ ಪ್ರತಿಭಟನೆ ನಡೆಸಿದ್ರು. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸಾರಿಗೆ ನೌಕರರ ಪ್ರತಿಭಟನೆ ಆರಂಭವಾಗಿ ವಿಧಾನ ಸೌಧದ ವರೆಗೂ ಸಾಗಿತು.
ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು