ಮೆಹಬೂಬಾ ಮುಫ್ತಿಗೆ ಗೃಹ ಬಂಧನ..!

ಬುಡಕಟ್ಟು ಜನರಿಗಾಗಿ ಧ್ವನಿ ಎತ್ತಿದ ಮೆಹಬೂಬಾ ಮುಫ್ತಿಯನ್ನ ಕಳೆದ 15 ದಿನಗಳಲ್ಲಿ 3 ಬಾರಿ ಗೃಹ ಬಂಧನಕ್ಕೆ ಕೇಂದ್ರ ಸರ್ಕಾರ ಒಳಪಡಿಸಿದೆ.ಹೀಗಾಗಿ ಈ ಕುರಿತು ಟ್ವೀಟ್ ಮಾಡಿರುವ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಬುಡಕಟ್ಟು ಜನರನ್ನು ಅರಣ್ಯ ಪ್ರದೇಶಗಳಿಂದ ಹೊರಹಾಕಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಡೆಯಿಂದ ಬುಡಕಟ್ಟು ಸಮುದಾಯದ ಕುಟುಂಬಗಳು ಬೀದಿಗೆ ಬೀಳುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಮೆಹಬೂಬಾ ಮುಫ್ತಿ ಬುಡಕಟ್ಟು ಸಮುದಾಯಗಳ ಕುಟುಂಬಗಳನ್ನು ಮುಖತಃ ಭೇಟಿ ಮಾಡಿ ಅವರ ಸಮಸ್ಯೆಯನ್ನು ಆಲಿಸಿದ್ದಾರೆ. ಇದೇ ಕಾರಣಕ್ಕೆ ಇದೀಗ ಅವರನ್ನು ಅವರ ಗುಪ್ಕರ್ ನಿವಾಸದಿಂದ ಹೊರಬರದಂತೆ ಪೊಲೀಸರು ನಿರ್ಬಂಧ ಹೇರಿದ್ದಾರೆ. ಹೀಗಾಗಿ ಮೆಹಬೂಬಾ ಮುಫ್ತಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment