ಹುಟ್ಟುಹಬ್ಬದ ದಿನವೇ ಪವನ್ ಒಡೆಯರ್ ಗೆ ಸಿಕ್ತು ಬಂಪರ್ ಗಿಫ್ಟ್..!

ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ಅವರಿಗೆ ಅವರ ಬರ್ತಡೇ ದಿನವೇ ಬಂಪರ್ ಗಿಫ್ಟ್ ಸಿಕ್ಕಿದೆ. ಅದು ಜಗತ್ತಿನ ಅತ್ಯಂತ ದೊಡ್ಡ ಉಡುಗೊರೆ. ಹೌದು… ತಮ್ಮ ಹುಟ್ಟುಹಬ್ಬದ ದಿನವೇ ಅವರು ಗಂಡು ಮಗುವಿನ ತಂದೆಯಾಗಿದ್ದಾರೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ ತಮ್ಮ ಇನ್ಸ್ಟಾ , ಟ್ವಿಟ್ಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೆ ನನ್ನ ಜನ್ಮದಿನದಂದೇ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು ಬರೆದುಕೊಂಡಿದ್ದಾರೆ.ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ಅಭಿನಯಿಸಿದ್ದಾರೆ.

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment