ಮಂಡ್ಯ

ಮೊಬೈಲ್ ಆಪ್ ಮೂಲಕ ಮಕ್ಕಳ ಸಮೀಕ್ಷೆ ತರಬೇತಿ ಕಾರ್ಯಾಗಾರ..!

Published

on

ಮಳವಳ್ಳಿ: ಜಿಲ್ಲಾಧಿಕಾರಿಗಳ ಕಚೇರಿ ಪೌರಾಡಳಿತ ಇಲಾಖೆ ಹಾಗೂ ಪುರಸಭೆ ಕಾರ್ಯಾಲಯ ವತಿಯಿಂದ ಮೊಬೈಲ್ ಆಪ್ ಮೂಲಕ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ತರಬೇತಿ ಕಾರ್ಯಾಗಾರವನ್ನು ಮಳವಳ್ಳಿ ಪಟ್ಟಣದಲ್ಲಿ ನಡೆಸಲಾಯಿತು.ಪಟ್ಟಣದ ಪುರಸಭೆಯ ಸಿಡಿಎಸ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ರಾಧನಾಗರಾಜು ಉದ್ಘಾಟಿಸಿದರು. ಇನ್ನೂ ಪುರಸಭೆ ಉಪಾಧ್ಯಕ್ಷ ನಂದಕುಮಾರ್ ಮಾತನಾಡಿ ರಾಜ್ಯದಲ್ಲಿರುವ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯಬೇಕೆಂಬ ಉದ್ದೇಶದಿಂದ ನ್ಯಾಯಾಲಯ ಹಾಗೂ ಸರ್ಕಾರವು ಮಕ್ಕಳ ಸಮೀಕ್ಷೆ ನಡೆಸಲು ಆದೇಶ ಹೊರಡಿಸಿದೆ. ಇದಲ್ಲದೆ ಮಕ್ಕಳ ಸಮೀಕ್ಷೆಯನ್ನು ಅಂಗನವಾಡಿ ಕಾರ್ಯ ಕರ್ತೆಯರು ನಡೆಸುವ ಮೂಲಕ ಮಕ್ಕಳಗಳನ್ನು ಗುರುತಿಸಿ ಶಾಲೆಗಳಿಗೆ ಸೇರಿಸುವ ಕೆಲಸ ಮಾಡಬೇಕು ಇದಕ್ಕೆ ಆಯಾಯಾ ಪುರಸಭೆ ವಾರ್ಡಿನ ಸದಸ್ಯರು ಸಹ ನಿಮಗೆ ಸಹಾಯ ಮಾಡುತ್ತಾರೆ ಎಂದರು.ಇದೇ ವೇಳೆ ಪುರಸಭೆ ಮುಖ್ಯಾಧಿಕಾರಿ ಗಂಗಾಧರ್ ಮಾತನಾಡಿ , ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆರು ಆಯಾಯ ವಾರ್ಡ್ ನಲ್ಲಿ ಮನೆಮನೆಗೂ ತೆರಳಿ 0 ಯಿಂದ 14 ವರ್ಷದ ಮಕ್ಕಳು ಶಾಲೆಗೆ ಹೋಗುತ್ತಿರುವವರು ಎಷ್ಟು ,ಹೋಗುತ್ತಿಲ್ಲದವರು ಎಷ್ಟು ಎಂಬುದನ್ನು ಮೊಬೈಲ್ ಅಫ್ ಮೂಲಕ ಅಫ್ ಲೋಡ್ ಮಾಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಗಂಗಾಧರ್, ಪುರಸಭೆ ಅರ್ ಓ ನಟರಾಜು, ಪುರಸಭೆಯ ಸಿಬ್ಬಂದಿ ರುಕ್ಮಿಣಿ, ಅಂಗನವಾಡಿ ಮೇಲ್ವಿಚಾರಕಿ,ಶೈಲಜಾ, ಪುರಸಭೆ ಸಿಬ್ಬಂದಿಗಳು ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version