ಲಿಂಗಸೂಗೂರು

ಬೆಳಗ್ಗೆ 5 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭ..!

Published

on

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ಬೆಳ್ಳಂ ಬೆಳಗ್ಗೆ 5 ಗಂಟೆಯಿಂದಲೇ ಮತ ಎಣಿಕೆ ಕೇಂದ್ರದ ಒಳಗೆ ಹೋಗಲು ಅಭ್ಯರ್ಥಿಗಳು ಮತ್ತು ಏಜೆಂಟರುಗಳ ನೂಕು ನುಗ್ಗಲು ಉಂಟಾಗಿತ್ತು.ಬೆಳಿಗ್ಗೆ 7 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಮತ ಎಣಿಕೆ ಪ್ರಕ್ರಿಯೆಗೆ ಆಗಮಿಸುವವರು ಕಡ್ಡಾಯವಾಗಿ ಮಾಸ್ಕ ಮತ್ತು ಸ್ಯಾನಿಟೈಸರ್ ಬಳಸಬೇಕು ಎಂದು ತಿಳಿಸಲಾಗಿತ್ತು. ಮತ ಎಣಿಕೆ ಪ್ರಾರಂಭ ಮಾಡಿದ್ದು ಕೇಂದ್ರದ ಒಳಗೆ ಸಾಮಾಜಿಕ ಅಂತರ ಕಾಪಾಡಬೇಕು. ಕೇಂದ್ರದ ಒಳಗೆ ಹೋಗುವ ಪ್ರತಿಯೊಬ್ಬರನ್ನು ಕೂಡ ತಪಾಸಣೆಯೊಂದಿಗೆ ಒಳಗೆ ಬಿಡಲಾಗಿತ್ತು.

ವರದಿ- ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version