ಸಿಂಧನೂರು

ಸಿಂಧನೂರು ಪದವಿ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ಪ್ರಕ್ರಿಯೆ..!

Published

on

ಸಿಂಧನೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದು ಮತ ಎಣಿಕೆ ಪ್ರಕ್ರಿಯೆ ನಗರದ ಪದವಿ ಮಹಾ ವಿದ್ಯಾಲಯದಲ್ಲಿ ಏರ್ಪಾಡು ಮಾಡಿಲಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಇಂದು ಬೆಳ್ಳಂಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕೇಂದ್ರದ ಒಳಗೆ ಹೋಗಲು ಅಭ್ಯರ್ಥಿಗಳು ಮತ್ತು ಏಜೆಂಟರ್ ಗಳ ನೂಕು ನುಗ್ಗಲು ಆಗುತ್ತಿದೆ. ಇನ್ನೂ ಮತ ಎಣಿಕೆ ಪ್ರಕ್ರಿಯೆಗೆ ಆಗಮಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ ಎಣಿಕೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಲು ಪೋಲಿಸರು ತಿಳಿಸಿದ್ದಾರೆ. ಇನ್ನೂ ಸಿಂಧನೂರು ತಾಲೂಕಿನಲ್ಲಿ 3೦ ಗ್ರಾಮಪಂಚಾಯಿತಿಗಳಿಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ ತಹಶೀಲ್ದಾರ್ ಎಲ್ಲಪ್ಪ ಸುಬೇದಾರ್ ನೇತೃತ್ವದಲ್ಲಿ ಇಂದು ಸ್ಟ್ರಾಂಗ್ ರೂಮ್ ಅನ್ನು ತೆರೆದು ಮತಪೆಟ್ಟಿಗೆಗಳನ್ನು ಕೊಠಡಿಗಳಿಗೆ ತೆಗೆದುಕೊಂಡು ಹೋಗಲಾಯಿತು. ಪ್ರತಿ ಎರಡರಿಂದ ಮೂರು ಗ್ರಾಮಪಂಚಾಯಿತಿಗಳ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಅಭ್ಯರ್ಥಿಗಳು ಮತ್ತು ತಂತ್ರಗಳು ಮತ ಎಣಿಕೆ ಕಾರ್ಯದಲ್ಲಿ ತೊಡಗಿದ್ದಾರೆ.

ವರದಿ- ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Click to comment

Trending

Exit mobile version