ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವದ ಸಂಭ್ರಮ..!

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ 30 ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳ ವಿಜಯೋತ್ಸವದ ಸಂಭ್ರಮ ಆಳಂದ ತಾಲೂಕಿನ ಮಾದನ ಹಿಪ್ಪರಗಾ ಗ್ರಾಮದಲ್ಲಿ ನಡೆಯಿತು. ಆಳಂದ ಪಟ್ಟಣದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಿನ್ನೇ ಬೆಳಗ್ಗೆಯಿಂದಲೇ ಮತ ಎಣಿಕೆ ಆರಂಭಿಸಿಲಾಗಿತು. ಮತ ಎಣಿಕೆ ಮಂದಗತಿಯಲ್ಲಿ ನಡೆದಿದ್ದರಿಂದ ತಡ ರಾತ್ರಿವರೆಗೂ ಎಣಿಕೆ ನಡೆಯಿತು. ಇದರಿಂದ ಫಲಿತಾಂಶಕ್ಕಾಗಿ ಹೊರಗಡೆ ಸಾವಿರಾರು ಜನರು ಚಳಿಯನ್ನು ಲೆಕ್ಕಿಸದೇ ಕಾಯುತ್ತಿರುವ ದೃಶ್ಯ ಕಂಡು ಬಂದಿತು. ಇನ್ನೂ ಗೆದ್ದ ಅಭರ್ಥಿಗಳು ಗ್ರಾಮಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ವರದಿ-ರಾಜಕುಮಾರ ಹಿರೇಮಠ ಎಕ್ಸ್ ಪ್ರೆಸ್ ಟಿವಿ ಆಳಂದ

Please follow and like us:

Related posts

Leave a Comment