Uncategorized

ಕುಡಿಯಲು ಹಣ ಕೊಡದ ಅಜ್ಜಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಮೊಮ್ಮಗ….!

Published

on

ಗೌರಿಬಿದನೂರು: ಕುಡಿಯಲು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ತನ್ನ ಅಜ್ಜಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೇದಲವೇಣಿ ಗ್ರಾಮದಲ್ಲಿ ನಡೆದಿದೆ. 68 ವರ್ಷದ ನರಸಮ್ಮ ಕೊಲೆಯಾದ ವೃದ್ಧೆ. 28 ವರ್ಷದ ಮೊಮ್ಮಗ ನರಸಿಂಹಮೂರ್ತಿ ಕೊಲೆ ಮಾಡಿದ ಆರೋಪಿಯಾಗಿದ್ದು, ನರಸಿಂಹಮೂರ್ತಿ ತನ್ನ ಅಜ್ಜಿಯ ಬಳಿ ಕುಡಿಯಲು ಹಣ ಕೇಳಿದ್ದಾನೆ, ಈ ಸಂದರ್ಭದಲ್ಲಿ ಆತನ ಅಜ್ಜಿ ಹಣ ನೀಡಲು ನಿರಾಕರಿಸಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version