Uncategorized

ಬೈಕ್ ವೀಲಿಂಗ್ ಹುಚ್ಚಿಂದ ಮಸಣ ಸೇರಿದ ಯುವಕರು..!

Published

on

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನ ವೀಲಿಂಗ್ ಮಾಡುವ ವೇಳೆ ಜೆಸಿಬಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸವಾರರಿಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಹೊರವಲಯದ ಹೊಸಹುಡ್ಯ ಗೇಟ್ ಸಮೀಪದಲ್ಲಿ ಸಂಭವಿಸಿದೆ. ಬೈಕ್ ಸವಾರರಿಬ್ಬರು ನಗರದ ಒನ್ ವೇ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಾ ತೆರಳುತ್ತಿದ್ದರು ಈ ವೇಳೆ ಎದುರು ಬರುತ್ತಿದ್ದ ಜೆಸಿಬಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಗುರುತು ಇದುವರೆವಿಗೂ ದೊರೆತಿಲ್ಲ, ಇನ್ನೂ ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ಧಾರೆ.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version