ಲಿಂಗಸೂಗೂರು

14 ನೇ ಹಣಕಾಸು ಯೋಜನೆ ಅನುದಾನ ದುರುಪಯೋಗ-ಪಿಡಿಒ ವಿರುದ್ಧ ಆಯೋಗಕ್ಕೆ ದೂರು..!

Published

on

ರಾಯಚೂರು: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಟ್ಟೂರು ಗ್ರಾಮ ಪಂಚಾಯತಿಯ ಪಿಡಿಒ 14ನೇ ಹಣಕಾಸು ಯೋಜನೆಯಡಿ ಬರುವ ಹಣವನ್ನು leg workouts ಕಾಮಗಾರಿಗೆ ಬಳಕೆ ಮಾಡದೇ,ನುಂಗಿ ನೀರು ಕುಡಿದಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ ವಿರುದ್ಧ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಿಗೆ ದೂರ ಸಲ್ಲಿಸಿದ್ದಾರೆ. ಮಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಕಾಮಗಾರಿಗಳು ಕೆಲಸ ಆಗದೆ ಬಿಲ್ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಮಾಹಿತಿ ಹಕ್ಕಿನಲ್ಲಿ ವರದಿ ಕೇಳಿದರೆ ಇದುವರೆಗೂ ಪಿಡಿಒ ಉತ್ತರ ಕೊಡದೇ ನುಣಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶೌಚಾಲಯ,ಎಸ್ಸಿ-ಎಸ್ಟಿ, ಮಕ್ಕಳಿಗೆ ಪ್ರತಿ ವರ್ಷ ಬುಕ್ಕುಗಳ ವಿತರಣೆ, ಶೌಚಾಲಯಗಳು ಆಯ ಸ್ಥಳಗಳಲ್ಲಿ ಇಲ್ಲದೇ ಹೋದರೂ ಬಿಲ್ ಗಳನ್ನು ಮಾಡಿದ್ದಾರೆ.ಅಷ್ಟೇ ಅಲ್ಲದೇ ದನದ ಶೆಡ್ ಸೇರಿದಂತೆ ವಿವಿಧ ಕಾಮಗಾರಿಗಳು ಆಗದೇ ಬಿಲ್ ಮಾಡಿಕೊಂಡು ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಮಾಹಿತಿ ಹಕ್ಕು ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version