ಲಿಂಗಸೂಗೂರು

ಪಾಳು ಬಿದ್ದ ಎಕ್ಸ್ ರೇ ಯಂತ್ರ- ಹಳ್ಳಿಗರ ಪರದಾಟ..!

Published

on

ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಕ್ಯಾನಿಂಗ್ ಸೇರಿದಂತೆ ಇನ್ನಿತರ ಯಂತ್ರಗಳ ಸೌಲಭ್ಯದ ಕೊರತೆಯಿಂದ ಚಿಕಿತ್ಸೆಗಾಗಿ ಜನರು ಖಾಸಗಿ ಆಸ್ಪತ್ರೆ ಇಲ್ಲವೇ ಲಿಂಗಸುಗೂರು ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮುದಗಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಕ್ಷಾಂತರ ರೂಪಾಯಿ ಬೆಲೆಯ ಎಕ್ಸ್ರೇ ಯಂತ್ರವಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಪ್ರಯೋಜನಕ್ಕೆ ಬರುತ್ತಿಲ್ಲ. ಎಕ್ಸ್ರೇ ಯಂತ್ರದ ನಿರ್ವಾಹಕರ ಸೇವೆಯನ್ನು ಸ್ಥಗಿತಗೊಳಿಸಿ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ನಿಯೋಜನೆಗೊಂಡಿರುವ ಕಾರಣ ಇಲ್ಲಿನ ಯಂತ್ರವು ಬಳಕೆಗೆ ಬಾರದೇ ಪಾಳು ಬಿದ್ದಿದೆ. ಇದರಿಂದಾಗಿ ಬಡರೋಗಿಗಳಿಗೆ ತುಂಬಾ ತೊಂದರೆಯಾಗಿದೆ. ಕೂಡಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಎಕ್ಸ್ ರೇ ಪ್ರಾರಂಭ ಮಾಡಿಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ವರದಿ-ವೀರೇಶ್ ಅರಮನಿ ಎಕ್ಸ್ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version