Uncategorized

ಸಿ ಆರ್ ಎಸ್ ಸೋಲಿನ ಅನುಭವವನ್ನು ನೆನಪಿಸಿಕೊಳ್ಳಲಿ-ಮಾಜಿ ಸಂಸದ ಶಿವರಾಮೇಗೌಡ..!

Published

on

ನಾಗಮಂಗಲ: ಚಿಕ್ಕಬಳ್ಳಾಪುರ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶದ ಲೆಕ್ಕಚಾರ ಸಮರ್ಥಿಸಿಕೊಳ್ಳುವಾಗ ನಮ್ಮ ಬಗ್ಗೆ ಹಗುರವಾಗಿ ಮಾತನಾಡುವ ಮೊದಲು ಅವರ ಸೋಲಿನ ನಂತರ ಅವರು ಹೇಗೆಲ್ಲಾ ನಡೆದುಕೊಂಡಿದ್ದರು ಎಂಬ ಬಗ್ಗೆ ಅವಲೋಕಿಸಿಕೊಳ್ಳಲಿ ಎಂದು ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ವಿರುದ್ದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಪಟ್ಡಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಗಮಂಗಲ ವಿಧಾನಸಭಾ ಕ್ಷೇತ್ರದ 35 ಗ್ರಾ.ಪಂ.ಗಳ ಪೈಕಿ ಅತಿ ಹೆಚ್ಚು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಜಯಶೀಲರಾಗಿರುವುದು ಸತ್ಯ. ಆದರೆ ಕಾಂಗ್ರೆಸ್ ಬೆಂಬಲಿತರೇ ಅತಿ ಹೆಚ್ಚು ಜಯಗಳಿಸಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಜೆಡಿಎಸ್ ಪಕ್ಷವನ್ನು ಅಣಕಿಸುವ ವಿರೋಧಿ, ತಾವು ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಹೇಗೆಲ್ಲಾ ನಡೆದುಕೊಂಡರು, ಎಷ್ಟೆಲ್ಲಾ ದಿನಗಳ ಕಾಲ ಕ್ಷೇತ್ರದ ಕಡೆ ತಲೆಹಾಕಲಿಲ್ಲ ಎಂಬುದನ್ನ ಅವಲೋಕಿಸಿಕೊಂಡು ನಂತರ ನಮ್ಮ ಬಗ್ಗೆ ಮಾತನಾಡಲಿ. ಆದರೆ ನಾನು ಕಳೆದ 23 ವರ್ಷಗಳಿಂದ ಅಧಿಕಾರವಿಲ್ಲದಿದ್ದರೂ ಜನತೆಯ ಕಷ್ಟ-ಸುಖಗಳಿಗೆ ಸ್ಪಂಧಿಸಿರುವುದಕ್ಕೆ ಗ್ರಾ.ಪಂ.ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದರು. ಇನ್ನೂ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಸೇರಿದಂತೆ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಮ್ಮ ಪಕ್ಷದ ಬೆಂಬಲಿತ ವಿಜೇತ ಅಭ್ಯರ್ಥಿಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹಾಗೂ ಶಾಸಕ ಸುರೇಶ್ಗೌಡರ ಅಧ್ಯಕ್ಷತೆಯಲ್ಲಿ ಬೃಹತ್ ಸಮಾರಂಭ ಆಯೋಜಿಸಿ ಸನ್ಮಾನಿಸಲಾಗುವುದು. ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದ ಅವರು, ಶಾಸಕ ಜಿ.ಟಿ.ದೇವೇಗೌಡರನ್ನು ಪಕ್ಷದಿಂದ ಉಚ್ಚಾಟಿಸುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಉಚ್ಚಾಟನೆ ಅಥವ ಪಕ್ಷದಲ್ಲೇ ಉಳಿಸಿಕೊಳ್ಳುವ ನಿರ್ಧಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಇದಕ್ಕೆ ಸಂಬಂಧಿಸಿದ ಎಲ್ಲಾ ಬೆಳವಣಿಗೆಗಳನ್ನು ಮಾಜಿ ಪ್ರಧಾನಿ ದೇವೇಗೌಡರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಪಕ್ಷದ ಆಂತರಿಕ ವಿಷಯಗಳನ್ನು ಬಹಿರಂಗವಾಗಿ ಹೇಳಿಕೆ ನೀಡುವುದು ಸಮಂಜಸವಲ್ಲ ಎಂದು ಸಲಹೆ ನೀಡಿದರು. ಈ ಸಂದರ್ಭ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಟಿ.ಕೆ.ರಾಮೇಗೌಡ ಹಾಗೂ ಮುಖಂಡ ಚೆನ್ನಪ್ಪ ಸೇರಿದಂತೆ ಮತ್ತಿತರರಿದ್ದರು.

ವರದಿ- ಎಸ್.ವೆಂಕಟೇಶ್ ಎಕ್ಸ್ ಪ್ರೆಸ್ ಟಿವಿ ನಾಗಮಂಗಲ.

Click to comment

Trending

Exit mobile version