Uncategorized

ತೋಟಗಾರಿಕೆ ಇಲಾಖೆಯಿಂದ ತರಭೇತಿ-ರೈತರೆಲ್ಲರೂ ಸರ್ಕಾರದಿಂದ ಸಿಗುವ ಸವಲತ್ತು ಪಡೆಯಬೇಕು- ಸಹಾಯಕ ನಿರ್ದೇಶಕಿ ಭಾರತಿ…!

Published

on

ಪಿರಿಯಾಪಟ್ಟಣ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಿಗೆ ಪಿರಿಯಾಪಟ್ಟಣದ ತೋಟಗಾರಿಕೆ ಇಲಾಖೆಯ ವತಿಯಿಂದ ಕಚೇರಿ ಆವರಣದಲ್ಲಿ ದಿನಾಂಕ 11-01-21 ರಂದು ಸೋಮವಾರ ತರಬೇತಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಪಡೆದುಕೊಂಡು ಆರ್ಥಿಕಾಭಿವದ್ಧಿ ಹೊಂದುವಂತೆ ಪಿರಿಯಾಪಟ್ಟಣ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಭಾರತಿರವರು ಮಾಧ್ಯಮದೊಂದಿಗೆ ತಿಳಿಸಿದರು. ಕೋವಿಡ್ – 19 ಸಮಸ್ಯೆಯಿಂದಾಗಿ 2020 – 21ನೇ ಸಾಲಿನಲ್ಲಿ ಇಲಾಖೆಯ ಅನೇಕ ಯೋಜನೆಗಳಿಗೆ ಸರ್ಕಾರದಿಂದ ಬಜೆಟ್ ತುಂಬಾ ಕಡಿಮೆ ಇರುವುದರಿಂದ ಈ ವರ್ಷ ಪ್ರಮುಖವಾಗಿ ಎರಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅದರಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾ ಯೋಜನೆ ಅಂದರೆ ಹನಿ ನೀರಾವರಿ ಯೋಜನೆ. ಇದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಕೃಷಿಗೆ ಮಿತವಾಗಿ ನೀರನ್ನು ಬಳಸಿ ತೋಟಗಾರಿಕಾ ಬೆಳೆಗಳನ್ನು ಬೆಳೆಸುವುದು. ಈ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇಕಡ 90 ರಷ್ಟು ಸಹಾಯಧನ ನೀಡಲಾಗುವುದು. ನರೇಗಾ ಯೋಜನೆಯಡಿಯಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುದಾನವಿದ್ದು ಪ್ರತಿಯೊಬ್ಬ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅದೇ ರೀತಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಸಹಾಯಧನ ಲಭ್ಯವಿದ್ದು, ಕೋವಿಡ್-19 ಕಾರಣದಿಂದ ಈ ವರ್ಷ ಅನುದಾನ ಬಿಡುಗಡೆಯಾಗಿಲ್ಲ. ಮುಂಬರುವ ದಿನಗಳಲ್ಲಿ ಎಲ್ಲಾ ಯೋಜನೆಗಳು ಅನುಷ್ಠಾನಗೊಳ್ಳಲಿದೆ. ಪ್ರತಿಯೊಬ್ಬ ರೈತರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಈ ಭಾಗದಲ್ಲಿ ತಂಬಾಕನ್ನು ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಿದ್ದು, ಇದು ಆರೋಗ್ಯಕ್ಕೆ ಹಾನಿಕಾರಕ. ತಂಬಾಕು ಬೆಳೆಗೆ ಪರ್ಯಾಯವಾಗಿ ತೋಟಗಾರಿಕಾ ಬೆಳೆಗಳನ್ನು ಸರ್ಕಾರದ ಸಹಾಯಧನ ಪಡೆದು ಬೆಳೆಯಿರಿ ಎಂದು ಸಲಹೆ ನೀಡಿದರು.

ವರದಿ- ರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Click to comment

Trending

Exit mobile version