ಭಿಕ್ಷುಕನಿಗೆ ಊಟ ನೀಡಿ ಮಾನವೀಯತೆ ಮೆರೆದ ಎಎಸ್ಐ..!

ಚಿಕ್ಕಬಳ್ಳಾಪುರ: ಪೊಲೀಸರ ಕುರಿತು ಸಾಕಷ್ಟು ನಕಾರಾತ್ಮಕ ಆಲೋಚನೆಗಳೇ ಕಣ್ಣ ಮುಂದೆ ಬರುತ್ತದೆ, ಆದರೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಸೋಮಶೇಖರ್ ಮಾನವೀಯತೆ ಮೆರದು ಜನರ ಮೆಚ್ಚಿಗೆಗಳಿಸಿದ್ದಾರೆ. ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಊಟವಿಲ್ಲದೆ ಅಸ್ವಸ್ಥಗೊಂಡಿದ್ದ ಭಿಕ್ಷುಕನನ್ನು ಗಮನಿಸಿ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣರಾಗಿದ್ದಾರೆ. ಈ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿ ಎಎಸ್ಐ ಸೋಮಶೇಖರ್ ಕಾರ್ಯವೈಕರಿ ಕಂಡು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Please follow and like us:

Related posts

Leave a Comment