ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Read MoreDay: May 5, 2021
“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”
ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.
Read Moreಕೇಂದ್ರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್
ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ಇಂದು ಸುಪ್ರೀಂ ಕೋರ್ಟ್ ಸೋಮವಾರದೊಳಗೆ ಆಮ್ಲಜನಕ ಪೂರೈಸುವಂತೆ ತನ್ನ ಆದೇಶದಲ್ಲಿ ಸೂಚಿಸಿದೆ. ದೆಹಲಿಗೆ 700 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿಲ್ಲ ಎಂದು ಕೇಂದ್ರವು ದೆಹಲಿ ಹೈಕೋರ್ಟ್ʼನಲ್ಲಿ ಏಕೆ ಹೇಳಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಆದೇಶವನ್ನ ಪಾಲಿಸುವುದು ಮತ್ತು ವಿಫಲ ಅಧಿಕಾರಿಗಳನ್ನ ಜೈಲಿಗೆ ಹಾಕುವುದು ಕೇಂದ್ರದ ಜವಾಬ್ದಾರಿ ಎಂದು ಹೇಳಿದೆ. ಇದೇ ವೇಳೆ, 10ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರದ ಸನ್ನದ್ಧತೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
Read Moreತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ
ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್. ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.
Read More