ಭೀಕರ ಅಪಘಾತಕ್ಕೆ ಮಹಿಳೆ ಬಲಿ, ಮೂವರ ಸ್ಥಿತಿ ಗಂಭೀರ…!

ಮುಳಬಾಗಿಲು: ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಜಮ್ಮನಹಳ್ಳಿ ಗೇಟ್ ಬಳಿ ತಡರಾತ್ರಿ ನಡೆದಿದೆ. ತಿರುಪತಿಯಿಂದ ಮಾಲೂರಿಗೆ ಹೊರಟಿದ್ದ ಸ್ವಿಫ್ಟ್ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಕಾರಿನಲ್ಲಿದ್ದ ಮಾಲೂರು ತಾಲ್ಲೂಕಿನ ಶಿವನಾಪುರ ಗ್ರಾಮದ ಪಾರ್ವತಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಕಾರು ಚಾಲಕ ವೆಂಕಟೇಶ್, ಶಿಲ್ಪಾ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ- ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ ಮುಳಬಾಗಿಲು

Read More