ಆಗಸ್ಟ್ 15 ರಂದು ಸರಳ ಸ್ವಾತಂತ್ರ್ಯ ದಿನಾಚರಣೆಗೆ ತಾಲ್ಲೂಕು ಆಡಳಿತದ ಸಂಕಲ್ಪ, ಕೊರೋನ ವಾರಿಯರ್ಸ್ ಗೆ ಗೌರವಿಸಲು ನಿರ್ಧಾರ.

ಹೊಳೆನರಸೀಪುರ: ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಇಂದು ಇದೇ ಆಗಸ್ಟ್ 15 ರ ಶನಿವಾರದಂದು ನಡೆಯಲಿರುವ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವ ಸಲುವಾಗಿ ತಹಸೀಲ್ದಾರ್ ಕೆ.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಸಭೆಯನ್ನು ಕರೆಯಲಾಗಿತ್ತು.ಈ ಬಾರಿ ಕೋವಿಡ್ – 19 ಹಾವಳಿಯಿಂದ ಜನತೆ ಸಂಕಷ್ಟದ ಪರಿಸ್ಥಿತಿಯಲ್ಲಿ ಇರುವಾಗ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ತೀರ್ಮಾನಿಸಲಾಯಿತು. ಪ್ರತಿ ವರ್ಷದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬೆಳಿಗ್ಗೆ 7 ಗಂಟೆಗೆ ತ್ರಿವರ್ಣ ಧ್ವಜಾರೋಹಣ ನಡೆಸಿ ನಂತರ ಮೆರವಣಿಗೆ ಮೂಲಕ ತಾಲ್ಲೂಕು ಕಛೇರಿಯಿಂದ ಹೊರಟು ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಯಚಾಮರಾಜೇಂದ್ರ ವೃತ್ತದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಬಯಲು ರಂಗ ಮಂದಿರದಲ್ಲಿ ಸಮಾವೇಷಗೊಂಡು 8- 30 ಕ್ಕೆ ತ್ರಿವರ್ಣ ಧ್ವಜಾರೋಹಣವನ್ನು ಮಾಡಲಾಗುತ್ತದೆ, ಈ ಸಂದರ್ಭದಲ್ಲಿ ರಾಷ್ಟ್ರಗೀತೆ, ನಾಡಗೀತೆ, ವಂದೇ…

Read More