ಕವಿತಾರೆಡ್ಡಿ ನೇತೃತ್ವದಲ್ಲಿ ಮುಖ್ಯಮಂತ್ರಿ ಹುಟ್ಟು ಹಬ್ಬ ಕುಮಾರಸ್ವಾಮಿ ಹುಟ್ಟು ಹಬ್ಬ ಆಚರಣೆ

ನಾಡಿನ ಮುಖ್ಯಮಂತ್ರಿಗಳಾದ ಸನ್ಮಾನ್ಯಶ್ರೀ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟು ಹಬ್ಬವನ್ನು ಯಲಹಂದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷರಾದ ಕವಿತಾರೆಡ್ಡಿಯವರ ಸಾರಥ್ಯದಲ್ಲಿ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನೂರಾರು ಬಡವರಿಗೆ ಕಂಬಳಿ ವಿತರಣೆ ಮಾಡಲಾಯಿತು, ಅಲ್ಲದೆ ಸಿಹಿ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಿ, ಕೇಕ್ ಕತ್ತರಿಸುವ ಮೂಲಕ ಮುಖ್ಯಮಂತ್ರಿಯವರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾದ ನಾರಾಯಣರಾವ್, ಬೆಂಗಳೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷರಾದ ಕೆ.ವಿ.ನಾರಾಯಣಸ್ವಾಮಿ, ಬೆಂಗಳೂರು ನಗರ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾದ ನಾಗರಾಜುರವರು, ಯಲಹಂಕದ ಜೆಡಿಎಸ್ ಮುಖಂಡ ಹನುಮಂತೇಗೌಡ, ಕ್ಷೇತ್ರದ ಅಧ್ಯಕ್ಷೆ ಕವಿತಾರೆಡ್ಡಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

Please follow and like us:

Related posts

Leave a Comment