ಬಾರ್ ತೆರವಿಗೆ ಆಗ್ರಹಿಸಿ ನಗರವಾಸಿಗಳಿಂದ‌ ಪ್ರತಿಭಟನೆ

ಬಾರ್​​ ತೆರವಿಗೆ ಆಗ್ರಹಿಸಿ ನಗರವಾಸಿಗಳಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ: ಮದ್ಯದಂಗಡಿಯನ್ನು ಸ್ಥಳಾಂತರಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ.

ಕಳೆದ 2 ದಿನಗಳ ಹಿಂದೆ ಮಂಜೇಶ್ (27) ಚಾಕ್ಲೆಟ್ ಕೊಡಿಸುವುದಾಗಿ 3 ನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರ ನಡೆದಸಿದ್ದು, ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದಾನೆ. ಬಂಧಿತ ಆರೋಪಿ ಇದೇ ಬಾರ್​ನಲ್ಲಿ ಮಧ್ಯ ಸೇವಿಸಿ, ಶಾಲೆಯಿಂದ ಬರುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ತಿಳಿದು ಬಂದಿದೆ. ಇದರಿಂದ ಸಾರ್ವಜನಿಕರು ಬಾರ್ ತೆರವಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.

ಇನ್ನು ಪ್ರತಿಭಟನೆ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಕೆಲಸಮಯ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡವೆ ಮಾತಿನ ಚಕಮುಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ರಸ್ತೆ ಸುಮಾರು 50 ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಪ್ರತಿನಿತ್ಯ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Please follow and like us:

Related posts

Leave a Comment