ಚಿಕ್ಕಬಳ್ಳಾಪುರ

ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

Published

on

ಅಂಗಡಿಗಳ ಮೇಲೆ ದಾಳಿ – ಪ್ಲಾಶ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಶಿಡ್ಲಘಟ್ಟ :ನಗರದಲ್ಲಿ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ನಗರಸಭೆ ಆಯುಕ್ತ ಜಿ.ಎನ್.ಚಲಪತಿ ಮಾತನಾಡಿದರು.

ಸಾರ್ವಜನಿಕರು ಪ್ಲಾಸ್ಟಿಕ್ ಬಳಸುವುದನ್ನು ಸಂಪೂರ್ಣ ನಿಲ್ಲಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ವರ್ತಕರು ಮತ್ತು ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪ್ಲಾಸ್ಟಿಕ್ ಬಳಸದೇ ಇರಲು ಸಂಕಲ್ಪ ಮಾಡಬೇಕು ಎಂದು ಅವರು ತಿಳಿಸಿದರು.

ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ನಗರದ ಪ್ರತಿಯೊಂದು ಅಂಗಡಿಗೂ ಭೇಟಿ ನೀಡಿ ಅಲ್ಲಿರುವ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗುತ್ತಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಈಗಾಗಲೇ ಸಾಕಷ್ಟು ಬಾರಿ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಲಾಗಿದ್ದರೂ ಲೆಕ್ಕಿಸದೇ ಬಳಸುತ್ತಿರುವ ಅಂಗಡಿ ಮಾಲೀಕರಿಗೆ ದಂಡ ವಿಧಿಸುವ ಜೊತೆಗೆ ಅಂತಹವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. ನಗರದ ಸಾರ್ವಜನಿಕರೂ ಸಹ ಈ ಕಾರ್ಯಕ್ಕೆ ಕೈ ಜೋಡಿಸುವ ಮೂಲಕ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬ ಸಂಕಲ್ಪ ಮಾಡಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರ ಎಂದು ಘೋಷಿಸಲು ಸಾಧ್ಯವಾಗುತ್ತದೆ ಎಂದರು.

ಪ್ರತಿಯೊಂದು ಅಂಗಡಿಗಳವರೂ ನಗರಸಭೆಯಿಂದ “ಟ್ರೇಡ್ ಲೈಸೆನ್ಸ್” ಪಡೆಯಬೇಕು. ಇಲ್ಲದಿದ್ದ ಪಕ್ಷದಲ್ಲಿ ಅಂಗಡಿಗಳನ್ನು ಮುಚ್ಚಿಸಲಾಗುವುದೆಂದು ತಿಳಿಹೇಳಿ, ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ದಾಳಿಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಆಂಜಿನಪ್ಪ, ಸಯೀದಾ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Click to comment

Trending

Exit mobile version