ತ್ರಿವೇಣಿ ಹಾಗೂ ಲೊಕೇಶ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಖಚಿತ – ರವಿಕುಮಾರ್

ಬೆಂಗಳೂರು:ಡಿ-೩೧:ಬೆಂಗಳೂರು ಉತ್ತರ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಯಲ್ಲಿ ಅವಿಶ್ವಾಸ ಮಂಡನೆ ನಂತರ ವಿಸ್ಮಯ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಗೋಪಾಲಪುರ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ರವಿಕುಮಾರ್ ಮಾತನಾಡಿ, ಈ ಬಾರಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ತ್ರಿವೇಣಿಯವರನ್ನು ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯರಾದ ಲೊಕೇಶ್ ಅವರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಆಲೂರು ಪಂಚಾಯಿತಿ ಸದಸ್ಯರೆಲ್ಲರೂ ಒಗ್ಗಟ್ಟಿನಿಂದ ಆಯ್ಕೆ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ. ಇವರ ಆಯ್ಕೆಯಲ್ಲಿ ಯಾವುದೇ ರೀತಿ ಗೊಂದಲವಿಲ್ಲ ಎಂದು ಅವರು ತಿಳಿಸಿದರು.
ಆಲೂರು ವಿಎಸ್‌ಎಸ್‌ಎನ್ ಬಗ್ಗೆ ಮಾತನಾಡಿದ ಅವರು ಪಂಚಾಯಿತಿ ಪ್ರಕ್ರಿಯೆ ಮುಗಿದ ನಂತರ ಆ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.

Please follow and like us:

Related posts

Leave a Comment