ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹಿರಿಯ ನಟ ಅಂಬರೀಶ್ ಅವರ ಪುತ್ರ ಅಭಿಷೇಕ್
ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ರೆ ನಾನು ಅವರ ಪರವಾಗಿ ಪ್ರಚಾರ ಮಾಡ್ತಿನಿ
ಅಂತ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಸೀತಾರಾಮ ಕಲ್ಯಾಣ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ನಿನ್ನೆ ನಡೆದ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್, ಈಗಾಗಲೇ ನಾನು ರಾಜಕೀಯದಲ್ಲಿ
ಸಕ್ರಿಯೆವಾಗಿದ್ದೇನೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ಪಕ್ಷದ
ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೂಡ ಮಾಡಿದ್ದೇನೆ. ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು
ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದರೆ ಜೆಡಿಎಸ್ ಪರವಾಗಿ ಪ್ರಚಾರ
ಮಾಡುತ್ತೇನೆ. ಕಾಂಗ್ರೆಸ್‍ನಿಂದ ಅಭಿಷೇಕ್ ಸ್ಪರ್ಧೆ ಮಾಡಿದ್ರೂ ನಾನು ಅಭಿಷೇಕ್
ಪರವಾಗಿಯೇ ಪ್ರಚಾರ ಮಾಡುತ್ತೇನೆ ಅಂತಾ ಹೇಳಿದ್ದಾರೆ.
ಇನ್ನೂ ಈ ವಿಷಯವಾಗಿ ಅಭಿ ಮತ್ತು ನಾನು ಫೋನ್ ನಲ್ಲಿ ಮಾತನಾಡಿದ್ದೇವೆ.
ಚುನಾವಣೆಗೆ ಸ್ಪರ್ಧೆ ಮಾಡ್ತೀರಾ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರ್, ಪಕ್ಷದ
ಮುಖಂಡರು ಮತ್ತು ಹಿರಿಯರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅದಕ್ಕೆ
ನಾನು ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.
ಅಂಬಿ ಪುತ್ರ ಅಭಿಷೇಕ್ ನಿಂತ್ರೂ, ಅವರ ಪರ ಪ್ರಚಾರ ಮಾಡ್ತಿನಿ : ನಿಖಿಲ್ ಕುಮಾರಸ್ವಾಮಿ

Please follow and like us: