ನೆಲಮಂಗಲ:ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಮಾಹಿತಿ ಪಡೆಯುವ ಆಂದೋಲನ ಆಂರAಭಿಸಿದ್ದು, ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯ ನಡೆಸುತ್ತಿದ್ದಾರೆ.
ಆದರೆ ಇದೇ ಆಶಾ ಕಾರ್ಯಕರ್ತೆಯರಿಗೆ ಧಮಕಿ ಹಾಕಿ ಹಲ್ಲೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಸದ್ಯ ಬೆಂಗಳೂರು, ಇಂದೋರ್‌ನಲ್ಲಿ ಹಲ್ಲೆ ನಡೆಸಿದ ಪ್ರಕರಣಗಳ ಬೆನ್ನಲ್ಲೇ ಇಂತಹುದ್ದೇ ಮತ್ತೊಂದು ಘಟನೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಕಳಲುಘಟ್ಟ ಗ್ರಾಮದಲ್ಲಿ ನಡೆದಿದ್ದು, ಆಶಾ ಕಾರ್ಯಕರ್ತೆಗೆ ಧಮ್ಕಿ ಹಾಕಿ ಮುಸ್ಲಿಂ ಕುಟುಂಬದ ಸದಸ್ಯರು ವಾಗ್ವಾದ ನಡೆಸಿದ್ದಾರೆನ್ನಲಾಗಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೋಲೀಸರು ಬಂದರೂ ಅವರನ್ನು ಕೂಡ ಮುಸ್ಲಿಂ ಕುಟುಂಬದ ಸದಸ್ಯರು ಪರಿಗಣಿಸಿಲ್ಲ ಎನ್ನಲಾಗಿರುವ ಪರಿಣಾಮ ಆಶಾ ಕಾರ್ಯಕರ್ತೆಯರು ಇನ್ನಷ್ಟು ಭಯಭೀತರಾಗಿದ್ದಾರೆ.
ಇದಾದ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ವೈದ್ಯ ಡಾ.ಲಕ್ಷ್ಮೀಕಾಂತ್ ಹೇಳಿಕೆಗೂ ಆ ವ್ಯಕ್ತಿಗಳು ಬೆಲೆ ಕೊಡದಿದ್ದಾಗ ನಂತರ ತಹಸೀಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿದರು.
ಇದಾದ ಬಳಿಕ ಮಾಹಿತಿ ನೀಡದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಎಚ್ಚರಿಕೆ ನೀಡಿಡುತ್ತಿದ್ದಂತೆ ಕೊನೆಗೆ ಮುಸ್ಲಿಂ ಕುಟುಂಬದ ಸದಸ್ಯರು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದ್ದಾರೆ.
ನೆಲಮಂಗಲದ ಬಳಿ ಆಶಾ ಕಾರ್ಯಕರ್ತೆಗೆ ಧಮ್ಕಿ

Please follow and like us: