ಸಿಂಧನೂರಿನಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ

ಸಿಂಧನೂರು: ಗ್ರಾಮೀಣ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಇಸ್ಪೀಟ್ ಅಡ್ಡ ಮೇಲೆ ದಾಳಿ ೧೪ ಜನರ ಮೇಲೆ ಪ್ರಕರಣ ದಾಖಲೆ ಮಾಡಿಕೊಂಡಿದ್ದಾರೆ.
ತಾಲೂಕಿನ ಆರ್.ಹೆಚ್.ನಂ ೫ರ ಗ್ರಾಮದ ಕೈಲಾಸ ಭೈರಾಗಿ ಎಂಬುವರ ಹೊಲದ ಕೆರೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಗುಂಪು ಕೂಡಿ ಅಂದರ್ – ಬಾಹರ್ ಇಸ್ಪೀಟ್ ಜೂಜಾಟ ಆಟ ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡ ಇಸ್ಪೀಟ್ ಅಡ್ಡ ಮೇಲೆ ದಾಳಿ ನಡೆಸಿದೆ.
ದಾಳಿ ವೇಳೆ ಸುಮಾರು ೧೪೨೦ ರೂಪಾಯಿ ನಗದು ಹಣ ಮತ್ತು ಇಸ್ಪೀಟ್ ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬAಧ ೧೪ ಮಂದಿ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

Please follow and like us:

Related posts

Leave a Comment