ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ.
ಸದ್ಯ ಅಂಗಾAಗ ವೈಫಲ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಕಾಶ್ ಇಂದು ಇಹಲೋಕ ತ್ಯಜಿಸಿದ್ದು,ಅವರಿಗೆ ೪೪ ವರ್ಷಯಸ್ಸಾಗಿತ್ತು.
ನಟ ಪ್ರಕಾಶ್ ತಾಯಿ, ಪತ್ನಿ, ಮಗಳು ಹಾಗೂ ಮಗನನ್ನು ಅಗಲಿದ್ದು,ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಇನ್ನು ಸುಮಾರು ೩೨೫ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪ್ರೇಕ್ಷಕರನ್ನು ರಂಜಿಸಿದ್ದ ನಟ ಪ್ರಕಾಶ್ ದೇಹದ ತೂಕ ಇಳಿಸಿಕೊಳ್ಳಲು ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದರು. ೩೫ ಕೆ.ಜಿ. ತೂಕ ಸಹ ಇಳಿಸಿಕೊಂಡಿದ್ದರು.
ಇದಾದ ಬಳಿಕ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡ ನಂತರ ಬುಲೆಟ್ ಪ್ರಕಾಶ್ ಅವರಿಗೆ ಸಿನಿಮಾಗಳಲ್ಲಿ ಅವಕಾಶ ತೀರಾ ಕಡಿಮೆಯಾಗಿತ್ತು. ಇದರಿಂದಾಗಿ ಪ್ರಕಾಶ್ ಆರ್ಥಿಕವಾಗಿಯೂ ಸಂಕಷ್ಟದಲ್ಲಿದ್ದರು.
ಈ ಹಿಂದಿನಿAದ ಬುಲೆಟ್ ಪ್ರಕಾಶ್‌ರಿಗೆ ಕಿಡ್ನಿ ವೈಫಲ್ಯ ಮತ್ತು ಸೋಂಕಿನಿAದ ಬಳಲುತ್ತಿದ್ದರು. ಅವರಿಗೆ ಡಯಾಲಿಸ್ ಮಾಡಲಾಗುತ್ತಿತ್ತು. ಆದರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ನಗರ ಪೊರ್ಟೀಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ನಟ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ.
ಇನ್ನು ೨೦೦೨ರ ಧ್ರುವ ಚಿತ್ರದಿಂದ ಆರಂಭಗೊAಡ ಇವರ ಸಿನಿ ಜರ್ನಿ, ಪಾರ್ಥ, ಮಸ್ತ್ ಮಜಾ ಮಾಡಿ, ಐತಲಕಡಿ ಸೇರಿದಂತೆ ರಾಜಸಿಂಹದ ನಂತ್ರ ಮುಂದುವರೆದಿತ್ತು. ೨೦೧೫ ರಲ್ಲಿ, ಪ್ರಕಾಶ್ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದ ಅವರು, ಕನ್ನಡ ಅಷ್ಟೇ ಅಲ್ಲದೇ ಸೌಂತ್ ಇಂಡಿಯನ್ ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಇಂತಹ ನಟ ಇದೀಗ ನಮ್ಮನ್ನು ಅಗಲಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ.

Please follow and like us:

Related posts

Leave a Comment