ಇಂದಿರಾ ಕ್ಯಾಂಟೀನ್ ನಲ್ಲಿ ಸಿದ್ದರಾಮಯ್ಯ ರಿಯಾಲಿಟಿ ಚೆಕ್

ಬೆಂಗಳೂರು:ಕೊರೋನಾ ಅಬ್ಬರದ ಬಳಿಕ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡಿದರೆ ದುರುಪಯೋಗವಾಗುತ್ತದೆ ಎಂಬ ಕಾರಣಕ್ಕೆ ಸರಕಾರ ಈ ಕ್ರಮ ಕೈಗೊಂಡಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಈ ಸಂಬಂಧ ಸರಕಾರಕ್ಕೆ ಪತ್ರವನ್ನೂ ಬರೆದಿದ್ದರು.
ಈ ನಡುವೆ ಇಂದು ಬೆಂಗಳೂರಿನ ವಿವಿಧ ಬಡಾವಣೆಯ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಜೊತೆ ಮಾತುಕತೆ ನಡೆಸಿ ಅವರ ಸಮಸ್ಯೆಯನ್ನು ಆಲಿಸಿ, ಉಚಿತವಾಗಿ ಆಹಾರ ವಿತರಿಸುವಂತೆ ಸರಕಾರವನ್ನು ಒತ್ತಾಯಿಸಿದರು.
ವಸಂತನಗರ, ಹೆಬ್ಬಾಳ ಹಾಗೂ ಆರ್.ಟಿ. ನಗರ ಬಡಾವಣೆಯ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಈ ವೇಳೆ ಇಂದಿರಾ ಕ್ಯಾಟೀನ್‌ಗೆ ಬರುವವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿರುವುದು ಕಂಡುಬಂದಿರುವುದನ್ನು ಗಮನಿಸಿದರು.
ತಮ್ಮ ರಿಯಾಲಿಟಿ ಚೆಕ್ ಕುರಿತಂತೆ ಮಾತನಾಡಿದ ಸಿದ್ದರಾಮಯ್ಯ, ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರ್ಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡುತ್ತಿದ್ದ ಸಂದರ್ಭದಲ್ಲಿ ಕ್ಯಾಂಟೀನ್‌ಗಳಲ್ಲಿ 700ಕ್ಕೂ ಅಧಿಕ ಮಂದಿ ಊಟ, ತಿಂಡಿ ಮಾಡುತ್ತಿದ್ದರು. ಈಗ ಅವರ ಸಂಖ್ಯೆ 100-150ಕ್ಕೆ ಇಳಿದಿದೆ. ಉಚಿತವಾಗಿ ಊಟ, ತಿಂಡಿ ಪೂರೈಕೆ ಮಾಡಿದರೆ ಬಡವರಿಗೆ ಅನುಕೂಲವಾಗುತ್ತದೆ. ದರ ನಿಗದಿ ಮಾಡಿರುವ ಸರ್ಕಾರದ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತಿದ್ದೇನೆ ಎಂದರು.

Please follow and like us:

Related posts

Leave a Comment