ಸಿಲಿಕಾನ್ ಸಿಟಿಯಲ್ಲಿ ಮತ್ತೆ ಆರ್ಭಟಿಸಿದ ವರುಣ


ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ಜೋರಾಗಿದೆ ಇಂದು. ಗುಡುಗು ಮಿಂಚಿನ ಮಳೆಗೆ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಇನ್ನೂ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಲ್ಲಿ ಜೋರಾಗಿ ಬಂದ ಗಾಳಿ ಮಳೆಯಿಂದ ಪಿಲ್ಲರ್ ಕಂಬಿಗಳು ಹಾರೋಹಳ್ಳಿಯಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ಕಂಪನಿಯ ಬಸ್ ಮೇಲೆ ಬಿದ್ದಿದೆ. ಮೆಟ್ರೋ ಪಿಲ್ಲರ್ ಗಾಗಿ ಅಳವಡಿಸಲು ನಿಲ್ಲಿಸಲಾಗಿದ್ದ ಕಬ್ಬಿಣದ ಕಂಬಿಗಳು ಬಸ್ ಮೇಲೆ ಬಿದ್ದು ಹಾನಿಯುಂಟು ಮಾಡಿದೆ. 25 ಜನರನ್ನು ಕರೆದೊಯ್ಯುತ್ತಿದ್ದ ಬಸ್ ಇದಾಗಿದ್ದು ಬಸ್ಸಿನ ಮುಂಭಾಗದಲ್ಲಿ ಕಂಬಿಗಳು ಬಿದ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌. ಘಟನಾ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ತಿಕ್
ಎಕ್ಸ್ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment