ಟಿಇಟಿ ಪರೀಕ್ಷೆ ಮುಂದೂಡಿಕೆ..

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮುಂದುವರಿಕೆ ಹಿನ್ನೆಲೆಯಲ್ಲಿ ಟಿಇಟಿ ಪರೀಕ್ಷೆಯನ್ನು ಮುಂದೂಡಲು ರಾಜ್ಯ ಸರ್ಕಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಶಿಕ್ಷಕರ ನೇಮಕಾತಿ ಸಂಬ0ಧ ಟಿಇಟಿ ಪರೀಕ್ಷೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುತ್ತಾ ಬಂದಿದೆ.ಆದರೆ ಈ ಬಾರಿ ಲಾಕ್‌ಡೌನ್ ಆದ ಹಿನ್ನೆಲೆಯಲ್ಲಿ ಟಿಇಟಿ ಪರೀಕ್ಷೆಯನ್ನು ಅನಿರ್ದಿ ಷ್ಟ್ಟಾವಧಿಗೆ  ಮುಂದೂಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಟಿಇಟಿ ಪರೀಕ್ಷೆ ಸಂಬ0ಧ ಅರ್ಜಿ ಅಹ್ವಾನಿಸಲಾಗಿತ್ತು.ಅದರ ನಡುವೆಯೇ ಕೊರೊನಾ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಇಡೀ ಭಾರತವನ್ನು ಲಾಕ್‌ಡೌನ್ ಮಾಡಲಾಗಿತ್ತು.ಇದೀಗ ಆ ಲಾಕ್‌ಡೌನ್ ಮುಂದುವರೆಯುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಿಇಟಿ ಪರೀಕ್ಷೆಯನ್ನು ಮುಂದೂಡಲಾಗುತ್ತಿದೆ.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment