ಬಿರಿಯಾನಿ ತಿನ್ನಿಸಿದ್ದ ಜಯರಾಂನ ಬೆಂಬಲಿಗರಿಗೆ `ಮಸಾಲೆ ಅರೆದ ಖಾಕಿ’

ತುಮಕೂರು : ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಂನ ಬೆಂಬಲಿಗರಾದ ವಿರುದ್ಧ ಸ್ವಯಂ ಪ್ರೇರಿತರಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅAದ ಹಾಗೇ ಮಸಾಲೆ ಜಯರಾಂ ಜನ್ಮದಿನ ಕಾರ್ಯಕ್ರಮ ಆಯೋಜಿಸಿದ್ದ ಇಡಗೂರು ರವಿ,ರಾಜೇನಹಳ್ಳಿ ವಸಂತ ಕುಮಾರ್ ಹಾಗೂ ಹೊನ್ನೆಗೌಡ ಹಾಗೂ ಇತರರ ವಿರುದ್ಧ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿಗೆ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಇಡಗೂರು ಗ್ರಾಮದಲ್ಲಿ ತುರುವೇಕೆರೆ ಶಾಸಕ ಮಸಾಲೆ ಜಯರಾಂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದರು.
ಆದರೆ ಹುಟ್ಟು ಹಬ್ಬದ ಆಚರಣೆ ವೇಳೆ ಶಾಸಕರು ಲಾಕ್ ಡೌನ್ ಉಲ್ಲಂಘನೆ ಮಾಡಿದ್ದರು. ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಇಡಗೂರು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಮಾತ್ರವಲ್ಲದೆ, ಬಂದವರಿಗೆಲ್ಲಾ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು.ಸಾಮಾಜಿಕ ಅಂತರಕ್ಕೆ ಗೋಲಿ ಹೊಡೆದ ಶಾಸಕರ ಕಾರ್ಯವೈಖರಿಗೆ ಜನ ಛೀ..ಥೂ ಎಂದು ಉಗಿದಿದ್ದರು.

ಶ್ರೀಮಂತ್ ಕುಮಾರ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Please follow and like us:

Related posts

Leave a Comment