ರಾಜ್ಯದ ಹಣಕಾಸು ಸ್ಥಿತಿ ಸರಿಯಿಲ್ಲ ಎಂದ ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದ ಹಣಕಾಸಿನ ಪರಿಸ್ಥಿತಿ ಚೆನ್ನಾಗಿಲ್ಲ.ಹೀಗಾಗಿ ಹಣಕಾಸು ಪರಿಸ್ಥಿತಿ ಸುಧಾರಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸುವುದಾಗಿ ಸಿಎಂ ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಕೋವಿಡ್-೧೯ನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕುಸಿತವಾಗಿದೆ. ಇದನ್ನು ಸರಿದೂಗಿಸಲು ಹಲವು ಮಾರ್ಗೋಪಾಯಗಳನ್ನು ಕಂಡು ಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.ರಾಜ್ಯದ ಹಣಕಾಸು ಸ್ಥಿತಿ ಸರಿಯಿಲ್ಲ, ಪರಿಸ್ಥಿತಿ ಸುಧಾರಣೆಗೆ ಕ್ರಮಅನಧಿಕೃತ ಕಟ್ಟಡಗಳ ತೆರವು ಮಾಡಿಬಿಡಿಎ ವ್ಯಾಪ್ತಿಯ ೧೨ ಸಾವಿರ ಕಾರ್ನರ್ ಸೈಟ್ ಮಾರಾಟಕ್ಕೆ ನಿರ್ಧರಿಸಲಾಗಿದೆ. ಬಹಿರಂಗ ಹರಾಜು ಮೂಲಕ ಮಾರಾಟ ಮಾಡಲಾಗುತ್ತದೆ. ಮಾರುಕಟ್ಟೆ ಬೆಲೆ ಸಿಕ್ಕರೆ ಮಾತ್ರ ಮಾರಾಟ ಮಾಡಲಾಗುತ್ತದೆ. ಇದರಿಂದ ಒಂದಷ್ಟು ಆರ್ಥಿಕ ಹೊರೆ ಕಡಿಮೆಯಾಗಲಿದೆ. ರಾಜ್ಯದ ಇತರ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿಯೂ ಮೂಲೆ ನಿವೇಶನಗಳು ಹಾಗೂ ಖಾಲಿ ಇರುವ ನಿವೇಶನಗಳನ್ನು ಹರಾಜು ಹಾಕಲು ಕ್ರಮ ವಹಿಸಲಾಗುವುದು ಎಂದರು.
ಇದಲ್ಲದೆ, ಮುಂದಿನ ಒಂದು ವಾರ ಉಚಿತ ಹಾಲು ಕೊಡಲು ತೀರ್ಮಾನಿಸಲಾಗಿದೆ.ಹೀಗಾಗಿ ಏಪ್ರಿಲ್ ೧೪ರವರೆಗೆ ರಾಜ್ಯದ ಬಡವರು ಹಾಗೂ ಸ್ಲಂ ನಿವಾಸಿಗಳಿಗೆ ಉಚಿತ ಹಾಲು ಪೂರೈಕೆ ಮಾಡಲು ನೀಡಿದ್ದ ಆದೇಶವನ್ನು ಮತ್ತೊಂದು ವಾರಕ್ಕೆ ವಿಸ್ತರಣೆ ಮಾಡಲಾಗುತ್ತದೆ ಎಂದರು.
ಇನ್ನು ಅನಧಿಕೃತ ಕಟ್ಟಡಗಳ ಕುರಿತು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರಯತ್ನಿಸುವಂತೆ ಸೂಚಿಸಲಾಗಿದೆ. ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥವಾದರೆ ನಾಗರಿಕರಿಗೂ ಅನುಕೂಲವಾಗಲಿದೆ. ರಾಜ್ಯಕ್ಕೂ ಸಂಪನ್ಮೂಲ ದೊರೆಯಲಿದೆ.ಇದರ ಜೊತೆ ೧೧ ಜಿಲ್ಲೆಗಳಲ್ಲಿ ೨೮೩೪ ಕೋಟಿ ಹಣವನ್ನು ಕಬ್ಬು ಬೆಳೆಗಾರರಿಗೆ ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಉಳಿಸಿಕೊಂಡಿದ್ದಾರೆ. ಕೂಡಲೇ ಬಾಕಿ ಉಳಿಸಿಕೊಂಡ ಹಣವನ್ನು ರೈತರಿಗೆ ಕೊಡುವಂತೆ ಸೂಚನೆ ನೀಡಿದ್ದೇನೆ. ಒಂದು ವೇಳೆ ಬಾಕಿ ಹಣ ಕೊಟ್ಟಿಲ್ಲ ಅಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ಬಿಎಸ್‌ವೈ ಎಚ್ಚರಿಕೆ ನೀಡಿದರು.
ಇನ್ನು ಪ್ರಸ್ತುತ ಕೋವಿಡ್-೧೯ಗೆ ಸಂಬAಧಿಸಿದAತೆ ವಿವಿಧ ಇಲಾಖೆಗಳಡಿ ಪೋರ್ಟಲ್‌ಗಳನ್ನು ನಿರ್ವಹಿಸಲಾಗುತ್ತಿದ್ದು, ಇವುಗಳನ್ನು ಏಕೀಕೃತ ಪೋರ್ಟಲ್ ವ್ಯವಸ್ಥೆಯಡಿ ತರಲು ತೀರ್ಮಾನಿಸಲಾಯಿತು.ಅಲ್ಲದೆ, ಬಡಾವಣೆ ನಿರ್ಮಾಣಕ್ಕೆ ಕಾನೂನು ತಿದ್ದುಪಡಿಖಾಸಗಿ ಮತ್ತು ಸಹಕಾರಿ ಸಂಘಗಳ ಬಡಾವಣೆ ನಿರ್ಮಾಣ ಹಾಗೂ ನಿವೇಶನಕ್ಕೆ ಸಂಬAಧಿಸಿದAತೆ ಕಾನೂನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಅನುಮತಿಗೆ ಕಾಯುತ್ತಿರುವ ನೂರಾರು ವಸತಿ ನಿರ್ಮಾಣ ಸೊಸೈಟಿಗಳಿಗೆ ಅನುಮತಿ ನೀಡಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment