ಅರಕಲಗೂಡು: ಕೋವಿಡ್-೧೯ ಹಿನ್ನೆಲೆಯಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲ ಕಡೆ ಸರಳವಾಗಿ ಆಚರಿಸಲಾಗುತ್ತಿದೆ.ಆದರೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಅಬಕಾರಿ ಇಲಾಖೆ ಅಧಿಕಾರಿಗಳು ಮಾತ್ರ ಇವತ್ತು ಅಂಬೇಡ್ಕರ್ ಜಯಂತಿ ಅನ್ನೋದನ್ನೇ ಮರೆತುಬಿಟ್ಟಿದ್ದಾರೆ..!
ಹೌದು, ದೇಶದೆಲ್ಲೆಡೆ ಕೊರೊನಾ ಆತಂಕದ ನಡುವೆಯೂ ಸರಳ ರೀತಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಮಾಡುತ್ತಿದ್ರೆ ಇಲ್ಲಿನ ಅಬಕಾರಿ ಅಧಿಕಾರಿಗಳು ಇದಕ್ಕೂ ತಮಗೂ ಸಂಬAಧವೇ ಇಲ್ಲ ಎಂಬAತೆ ವರ್ತಿಸಿದ್ದಾರೆ.
ಅಲ್ಲದೆ, ಅಬಕಾರಿ ಇಲಾಖೆ ಕಚೇರಿಯಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಬಹಳ ಹಿಂದೆ ಹಾಕಿರುವ ಹೂವು ಒಣಗಿ ಬತ್ತಿ ಹೋಗಿದೆ.
ಇನ್ನು ಅಂಬೇಡ್ಕರ್ ಜಯಂತಿ ಆಚರಿಸದೇ ನಿರ್ಲಕ್ಷ್ಯಿಸಿದ ಅಧಿಕಾರಿ ಸಿಬ್ಬಂದಿ ವಿರುದ್ದ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದ್ದು,ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಅಧ್ಯಕ್ಷ ಶಶಿಕುಮಾರ್ ಇದರ ಬಗ್ಗೆ ಪ್ರಶ್ನಿಸಿದ್ರೆ ಅಬಕಾರಿ ಇಲಾಖೆ ಸಿಬ್ಬಂದಿ ಉಡಾಫೆ ಉತ್ತರ ನೀಡಿರುವುದು ಬೆಳಕಿಗೆ ಬಂದಿದೆ.
ಎ.ಎಸ್ ಸಂತೋಷ್ ಎಕ್ಸ್ ಪ್ರೆಸ್ ಟಿವಿ ಅರಕಲಗೂಡು(ಹಾಸನ)
ಅಂಬೇಡ್ಕರ್ ಜಯಂತಿಯನ್ನೇ ಮರೆತ ಅಬಕಾರಿ ಇಲಾಖೆ..

Please follow and like us: