ಕಟ್ಟಡ ಕಾರ್ಮಿಕರಿಗೆ ಪಡಿತರ ಪೂರೈಕೆ ಮಾಡಿ

ಸಿಂಧನೂರು: ನೋಂದಣಿ ಮಾಡದೇ ಇರುವ ಕಟ್ಟಡ ಕಾರ್ಮಿಕರಿಗೆ ಪಡಿತರ ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾ ಸಮಿತಿಯು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.
ಅಂದ ಹಾಗೇ ಸಿಂಧನೂರು ನಗರದ ತಹಶೀಲ್ದಾರ್ ಕಚೇರಿ ಎದುರು ಜಿಲ್ಲಾ ಸಮಿತಿ ಮುಖಂಡರು ನೋಂದಣಿ ಮಾಡದೇ ಇರುವ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿAದ ಪಡಿತರ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು…
ಈ ವೇಳೆ ಕಾರ್ಮಿಕ ಮುಖಂಡ ಎಸ್.ಖಾದ್ರಿ ಮಾತನಾಡಿ ರಾಜ್ಯದಲ್ಲಿ ಕೊರೊನಾ ಭೀತಿಯಿಂದ ಲಾಕ್ ಡೌನ್ ಮಾಡಲಾಗಿದೆ. ಇದರ ಪರಿಣಾಮ ಲಕ್ಷಾಂತರ ಕಟ್ಟಡ ಕಾರ್ಮಿಕರು ಕೆಲಸ ಇಲ್ಲದೇ ಪರದಾಡುತ್ತಿದ್ದಾರೆ.ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಎರಡೂ ಸಾವಿರ ಘೋಷಣೆ ಮಾಡಿದು. ಜೊತೆಗೆ ನೊಂದಣಿ ಮಾಡಿದ ಕಟ್ಟಡ ಕಾರ್ಮಿಕರಿಗೆ ಪಡಿತರ ಪೂರೈಕೆ ಮಾಡಬೇಕು ಎಂದು ಹೇಳಿದರು….
ನಂತರ ಸಿಎಂಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದರು..
ಜೊತೆಗೆ ಮಾಜಿ ಸಚಿವ. ಶಾಸಕ ವೆಂಕಟರಾವ್ ನಾಡಗೌಡರಿಗೆ ಮನವಿ ಸಲ್ಲಿಸಿ ಶೀಘ್ರವಾಗಿ ಈ ಸಮಸ್ಯೆ ಬಗೆಹರಿಸಲು ಒತ್ತಾಯಿಸಿದರು.

ಬಂದೇ ನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು (ರಾಯಚೂರು)

Please follow and like us:

Related posts

Leave a Comment