ಈ ಮಹಿಳಾ ಅಧಿಕಾರಿಗೆ ಮೊದಲು ಕರ್ತವ್ಯ, ಆ ಮೇಲೆ ಮದುವೆ..

ಮಳವಳ್ಳಿ(ಮಂಡ್ಯ):ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಲಾಕ್‌ಡೌನ್‌ನನ್ನು ಜನರು ಪಾಲಿಸುವಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯ.ಸದ್ಯ ಈ ಕರ್ತವ್ಯದ ನಡುವೆಯೇ ಪೊಲೀಸರು ತಮ್ಮ ವೈಯಕ್ತಿಕ ಕೆಲಸಗಳನ್ನು ಬದಿಗೊತ್ತಿದ್ದಾರೆ.ಜೊತೆಗೆ ಮುಂದೂಡುತ್ತಿದ್ದಾರೆ.
ಅದರಲ್ಲೂ ಈ ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ವಿವಾಹವನ್ನು ಮುಂದೂಡಿ ಇತರರಿಗೆ ಮಾದರಿಯಾಗಿದ್ದಾರೆ.
ಹೌದು,ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಜೆ.ಪೃಥ್ವಿ ತಮ್ಮ ಮದುವೆಯನ್ನು ಮುಂದೂಡಿರುವ ಮಹಿಳಾ ಪೊಲೀಸ್ ಅಧಿಕಾರಿ.
ಇನ್ನು ಮಳವಳ್ಳಿಯಲ್ಲಿ ಕೊರೋನಾ ಸೋಂಕಿತರ ಹೆಚ್ಚಾಗಿದ್ದು,ಇದರ ಮಧ್ಯೆಯೇ ಎದೆಗುಂದದೆ ಕಾರ್ಯ ನಿರ್ವಹಿಸುತ್ತಿರುವ ಡಿವೈಎಸ್ಪಿ ಎಂ.ಜೆ.ಪೃಥ್ವಿ ಅವರ ಮದುವೆ ಇದೇ ತಿಂಗಳು ೫ನೇ ತಾರೀಖಿನಂದು ನಿಗದಿಯಾಗಿ ಮದುವೆಯಾಗಿತ್ತು.
ಆದರೆ ಡಿವೈಎಸ್ಪಿಯವರು ಮಾತ್ರ ತಮ್ಮ ಮದುವೆ ಮುಂದೂಡಿ ಕರ್ತವ್ಯ ನಿರ್ವಹಿಸುತ್ತಿದ್ದು,ಇವರ ಕಾರ್ಯಕ್ಕೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ,ಮಂಡ್ಯ ಜಿಲ್ಲೆಯ ಮಳವಳ್ಳಿ ಉಪವಿಭಾಗದ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಜೆ.ಪೃಥ್ವಿ ಅವರು ಏಪ್ರಿಲ್ ೫ರಂದು ಹಸೆಮಣೆ ಏರಬೇಕಿತ್ತು. ಆದರೆ ಕೊರೋನಾ ತಡೆಗಟ್ಟಲು ಲಾಕ್‌ಡೌನ್ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ ತಮ್ಮ ಮದುವೆಯನ್ನು ಮುಂದೂಡಿದ್ದಾರೆ. ಇಂತಹ ಧೈರ್ಯವಂತ, ದಕ್ಷ, ಪ್ರಾಮಾಣಿಕ, ಮಾದರಿ ಮಹಿಳಾ ಅಧಿಕಾರಿ ಮಂಡ್ಯ ಜಿಲ್ಲೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ” ಎಂದು ಸುಮಲತಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಇಂಥಾ ನಿರ್ಧಾರ ನಿಜಕ್ಕೂ ಮೆಚ್ಚುವಂತಹ ಕೆಲಸವಾಗಿದೆ.

ಎ.ಎನ್.ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ (ಮಂಡ್ಯ)

Please follow and like us:

Related posts

Leave a Comment